ಅವಳಿನಗರದ ರೌಡಿಶೀಟರ್‌ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು
01:52 PM May 27, 2024 IST | Samyukta Karnataka
ಹುಬ್ಬಳ್ಳಿ: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಹಾಗೂ ನೇಹಾ ಮತ್ತು ಅಂಜಲಿ ಹತ್ಯೆಯಾದ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಅವಳಿನಗರದ ಪೊಲೀಸರು ಸೋಮವಾರ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಬಿಸಿ
ಮುಟ್ಟಿಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆ ಮೇಲೆ ಬೆಳಗ್ಗೆ ದಾಳಿ ನಡೆಸಿರುವ ಪೊಲೀಸರು ತೀವ್ರ ತಪಾಸಣೆ ನಡೆಸಿದ್ದಾರೆ.