For the best experience, open
https://m.samyuktakarnataka.in
on your mobile browser.

ಕಾರು ಅಪಘಾತ ಇಬ್ಬರು ಶಿಕ್ಷಕರು ಸಾವು

11:25 AM May 12, 2024 IST | Samyukta Karnataka
ಕಾರು ಅಪಘಾತ ಇಬ್ಬರು ಶಿಕ್ಷಕರು ಸಾವು

ತುಮಕೂರು: ಕಾರ ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಿಲ್ಲೆಯ ಪಾವಗಡ ಕಣಿವೆನಹಳ್ಳಿ ಗೇಟ್‌ ಬಳಿ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕರು ತುಮಕೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ಪಾವಗಡಕ್ಕೆ ತೆರಳುತ್ತಿದ್ದರು. ಮೃತರನ್ನು ಪಾವಗಡ ಪಟ್ಟಣದ ಸರಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲ ಓ.ಧನಂಜಯ ಮತ್ತು ಗೌಡಟ್ಟಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಕೃಷ್ಣ ಎಂದು ಗುರುತಿಸಲಾಗಿದೆ. ಇದೇ ಕಾರಿನಲ್ಲಿದ್ದ ಇನ್ನಿಬ್ಬರು ಶಿಕ್ಷಕರಾದ ಆರ್.ಎಂ.ನರಸಿಂಹ ಮತ್ತು ವೆಂಕಟಾಚಲಪತಿ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಪಲ್ಟಿಯಾದ ತೀವ್ರತೆಗೆ ಕಾರು ಕೂಡ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.