For the best experience, open
https://m.samyuktakarnataka.in
on your mobile browser.

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ

03:07 PM May 09, 2024 IST | Samyukta Karnataka
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ

ಕನಕಪುರ: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ತಾಲ್ಲೂಕಿನ ಸೋಮನಹಳ್ಳಿ ಗೇಟ್ ಬಳಿ ಮುಂಜಾನೆ ಕನಕಪುರದ ಡಿಪೊಗೆ ಸೇರಿದ ಬಸ್ ಬೆಂಗಳೂರ ಕಡೆ ಹೊರಟ್ಟಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಕಗ್ಗಲಿಪುರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.