For the best experience, open
https://m.samyuktakarnataka.in
on your mobile browser.

ಬಾಯ್ಲರ್ ಸ್ಫೋಟ: ಓರ್ವ ಮಹಿಳೆ ಸಾವು

04:04 PM May 21, 2024 IST | Samyukta Karnataka
ಬಾಯ್ಲರ್ ಸ್ಫೋಟ  ಓರ್ವ ಮಹಿಳೆ ಸಾವು

ಬೆಳಗಾವಿ: ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
ಕೂಡಲೇ ಗಂಭೀರವಾಗಿ ಗಾಯಗೊಂಡವರನ್ನು ಅಥಣಿ ಮತ್ತು ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಿಯಾ ಎಕ್ಸ್‌ಪೋರ್ಟ್ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಾಗಿದ್ದು, ಹೈ ಪ್ರೆಶರ್​ನಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಲಾಸ್ಟ್ ಆದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗುಜ್ಜಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.