ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭೀಕರ ಅಪಘಾತ: ಮೂವರು ಸಾವು

02:07 PM Apr 18, 2024 IST | Samyukta Karnataka

ಬಾಗಲಕೋಟೆ: ಬಸ್‌ ಹಿಂಭಾಗಕ್ಕೆ ಕ್ರೂಸರ್ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಬಾಗಲಕೋಟೆಯ ಜಮಖಂಡಿ ತಾಲೂಕಿನ ರೆಹಮದ್ಪುರ್ ಗ್ರಾಮದಿಂದ ಮಹಾರಾಷ್ಟ್ರದ ತಾಜಗಾಂವಗೆ ಮದುವೆಗಾಗಿ ಕ್ರೂಸರ್‌ ವಾಹನದಲ್ಲಿ ಸುಮಾರು 13 ಜನರು ಪ್ರಯಾಣ ಬೆಳೆಸಿದ್ದರು. ಮಹಾರಾಷ್ಟ್ರದ ಜತ್ತ ಸಮೀಪ ನಿನ್ನೆ ಬುಧವಾರ ದುರ್ಘಟನೆ ನಡೆದಿದ್ದು‌ ತಡವಾಗಿ ಬೆಳಕಿಗೆ ಬಂದಿದೆ. ಭಾಗ್ಯಶ್ರೀ (18) ಅನುಸೂಯ (55), ಉಜ್ವಲ (23)ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಮಿರಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ರೆಹಮದ್ಪುರ, ಅಡಿಹುಡಿ, ಲೋಕಾಪುರ ಮತ್ತಿ ಹಲಗಲಿ ಗ್ರಾಮದವರು ಎಂದು ತಿಳಿದು ಬಂದಿದೆ.

Next Article