For the best experience, open
https://m.samyuktakarnataka.in
on your mobile browser.

31 ವರ್ಷದ ಬಳಿಕ ರಾಮಜನ್ಮಭೂಮಿ ಹೋರಾಟಗಾರನ ಬಂಧನ

09:34 PM Jan 01, 2024 IST | Samyukta Karnataka
31 ವರ್ಷದ ಬಳಿಕ ರಾಮಜನ್ಮಭೂಮಿ ಹೋರಾಟಗಾರನ ಬಂಧನ

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದ ಹೋರಾಟಗಾರರಿಗೆ 31 ವರ್ಷದ ಬಳಿಕ ಬಂಧನದ ಭೀತಿ ಎದುರಾಗಿದ್ದು, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ೩ನೇ ಆರೋಪಿಯಾಗಿದ್ದ ಶ್ರೀಕಾಂತ್ ಪೂಜಾರಿ ಅವರನ್ನು ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ. ಹೀಗಾಗಿ ಉಳಿದ ಹೋರಾಟಗಾರರಿಗೂ ಬಂಧನದ ಭೀತಿ ಎದುರಾಗಿದೆ.
ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ರಾಮಮಂದಿರ ಹೋರಾಟದ ಕರ ಸೇವೆಗೂ ಮುನ್ನ ೧೯೯೨ ಡಿಸೆಂಬರ್ ೫ ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ ಸಂಭವಿಸಿತ್ತು. ಆ ಸಂದರ್ಭದಲ್ಲಿ ಒಂದು ಮಳಿಗೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ೯ ಜನರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಮೂರನೇ ಆರೋಪಿಯಾಗಿರುವ ಶ್ರೀಕಾಂತ್ ಪೂಜಾರಿ ಅವರನ್ನು ಈಗ ಬಂಧಿಸಲಾಗಿದೆ. ಪ್ರಕರಣ ದಾಖಲಾದಾಗ ಹೋರಾಟಗಾರರು ೩೦ ರಿಂದ ೩೫ ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ ೬೫-೭೦ ವರ್ಷಗಳಾಗಿವೆ.