For the best experience, open
https://m.samyuktakarnataka.in
on your mobile browser.

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

04:43 PM Dec 26, 2024 IST | Samyukta Karnataka
ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ  ಸ್ಥಳದಲ್ಲೇ ಸವಾರ ಸಾವು

ಮಳವಳ್ಳಿ: ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಡೂರು ಗ್ರಾಮದ ಬಳಿ ನಡೆದಿದೆ.
ಬಂಡೂರು ಗ್ರಾಮದ ಶಿವಮಲ್ಲಯ್ಯ (49) ಮೃತಪಟ್ಟ ದುರ್ದೈವಿ. ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಬರುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.