ಅಪಾಯದ ಅಡಿಯಲ್ಲಿ ಚುರುಕು ನೋಟ ಬಿಡುಗಡೆ
ಅಪಾಯವಿದೆ ಎಚ್ಚರಿಕೆ ತಾಂತ್ರಿಕವಾಗಿ, ಕ್ರಿಯಾತ್ಮಕವಾಗಿ ಕೂಡ ಅದ್ಭುತ
ಬೆಂಗಳೂರು: 'ಅಪಾಯವಿದೆ ಎಚ್ಚರಿಕೆ' ಕನ್ನಡ ಚಿತ್ರರಂಗದ ವಿಭಿನ್ನ ಕಥೆಯ ಹಾರರ್ ಥ್ರಿಲ್ಲರ್ ಸಿನಿಮಾ ಚುರುಕು ನೋಟವೆ ಅನ್ನೋ ಸಾಂಗ್ ಬಿಡುಗಡೆಗೊಳಿಸಿದೆ..
ವಿ. ಜಿ ಮಂಜುನಾಥ್ ಮತ್ತು ಪೂರ್ಣಿಮ ಎಂ ಗೌಡ ನಿರ್ಮಾಣದ ಈ ಚಿತ್ರಕ್ಕೆ ಸಂಗೀತ, ಛಾಯಾಗ್ರಹಣ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ ಸುನಾದ್ ಗೌತಮ್. ಅಣ್ಣಯ್ಯ ಧಾರಾವಾಹಿ ಮೂಲಕ ಖ್ಯಾತಿ ಪಡೆದ ನಟ ವಿಕಾಶ್ ಉತ್ತಯ್ಯ, ಅಮೃತಧಾರೆ ಖ್ಯಾತಿಯ ರಾಧಾ ಭಗವತಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಪಾಯವಿದೆ ಎಚ್ಚರಿಕೆ ಚಿತ್ರ ತಾಂತ್ರಿಕವಾಗಿ, ಕ್ರಿಯಾತ್ಮಕವಾಗಿ ಕೂಡ ಅದ್ಭುತವೆನಿಸುವಂತೆ ಟೀಸರ್ ನಲ್ಲಿ ಕಂಡ ದೃಶ್ಯಗಳು, ಮ್ಯೂಸಿಕ್ ಮೂಲಕ ತಿಳಿಯುತ್ತದೆ. ಒಟ್ಟಾರೆ ಕುರ್ಚಿ ತುದಿಯಲ್ಲಿ ಕೂತು ನೋಡುವ ಸಿನಿಮಾ ಇದಾಗಿದ್ದು ಪ್ರೇಕ್ಷಕರಿಗೆ ಮನೋರಂಜನೆ ನೀಡುವ ಭರವಸೆ ನೀಡಿದ್ದಾರೆ ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ. ಇದೇ ಫೆ. 7 ರಂದು ಚಿತ್ರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.