For the best experience, open
https://m.samyuktakarnataka.in
on your mobile browser.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿಗೆ 2ವರ್ಷ ಜೈಲು

09:32 PM May 23, 2024 IST | Samyukta Karnataka
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ  ಆರೋಪಿಗೆ 2ವರ್ಷ ಜೈಲು

ಕುಷ್ಟಗಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ತಾಲೂಕಿನ ತಾವರಗೇರ ಪಟ್ಟಣದ ವಿರೇಶ ಬಿಸ್ತಿ ಶಿಕ್ಷೆಗೆ ಗುರಿಯಾದ ವ್ಯಕ್ತಿ.‌ ಕಳೆದ 2019ರ ಜೂನ್ 19ರಂದು ಹಾಗೂ ಪೂರ್ವದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದು ಸಾಬೀತಾಗಿದೆ. ಆರೋಪಿ ಫೋನ್‌ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ, ಲೈಂಗಿಕ ಚಟುವಟಿಕೆಗೆ ಪ್ರಚೋದನೆ ನೀಡಿದ್ದಾನೆ. ಅಲ್ಲದೇ ಬಾಲಕಿ ಹೊರಗೆ ಹೋದಾಗ ಸಾರ್ವಜನಿಕ ರಸ್ತೆಯ ಮೇಲೆ ಅಶ್ಲೀಲವಾಗಿ ಸನ್ನೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದ. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಇಂದು ಶಿಕ್ಷೆ ಪ್ರಕಟಿಸಿದೆ. ಸರಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದಿಸಿದ್ದರು.