ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

12:38 PM Mar 29, 2024 IST | Samyukta Karnataka

ಮೈಸೂರಿನ ಅಗ್ರಹಾರದ ಫೋರ್ಟ್ ಮೊಹಲ್ಲಾದಲ್ಲಿರುವ ‘ಅಭಿನವ ಶಂಕರಾಲಯ’ದ ಶತಮಾನೋತ್ಸವ ಸಂಭ್ರಮಾಚರಣೆಗೆ ಅರಮನೆ ನಗರಿ ಸಜ್ಜಾಗಿದೆ. ಶ್ರೀ ಶೃಂಗೇರಿ ಶಂಕರ ಮಠ ಆಯೋಜಿಸಿರುವ ಒಂದು ವಾರದ ಕಾರ್ಯಕ್ರಮಕ್ಕೆ (ಮಾ. 30ರಿಂದ ಏಪ್ರಿಲ್ 6) ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ.
ಸಹಸ್ರ ಮೋದಕ ಗಣಪತಿ ಹೋಮದೊಂದಿಗೆ ಮಾ. 30ರಂದು ಶತಮಾನೋತ್ಸವ ಸಪ್ತಾಹ ವಿಧ್ಯುಕ್ತ ಚಾಲನೆ ಪಡೆಯಲಿದೆ. ಅಂದು ಬೆಳಗ್ಗೆ ಮಠದ ಆವರಣದಲ್ಲಿ ನೂರಾರು ಋತ್ವಿಜರು, ಪಂಡಿತರು, ಅದ್ವೈತ ವಿದ್ವಾಂಸರು, ಮಠದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಗಣಪತಿ ಹೋಮ ಸಂಪನ್ನಗೊಳ್ಳಲಿದೆ.
ಶೃಂಗೇರಿಯ ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಯವರು 30ರ ಸಂಜೆ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ಪ್ರವೇಶ ಮಾಡಲಿದ್ದಾರೆ. ಸಂಜೆ 6ಕ್ಕೆ ನಗರದ ಸ್ಕೌಟ್ ಭವನದ ಸಮೀಪ ಅವರನ್ನು ಪೂರ್ಣಕುಂಭ ಸಮೇತ ಮಂಗಳವಾದ್ಯಗಳೊಂದಿಗೆ ಸ್ವಾಗತಿಸಲಾಗುವುದು. ಅಲ್ಲಿಂದ ಶ್ರೀ ಶಂಕರ ಮಠದವರೆಗೆ (ರಾಮಸ್ವಾಮಿ ಸರ್ಕಲ್, ಚಾಮರಾಜ ಜೋಡಿ ರಸ್ತೆ ಮೂಲಕ) ಅವರನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಗುವುದು. ಸಂಜೆ 7ಕ್ಕೆ ಜಗದ್ಗುರುಗಳು ಮಠದ ಆವರಣದಲ್ಲಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನ ಹಾಗೂ ಸಭಾಂಗಣವನ್ನು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಲಿದ್ದಾರೆ. ರಾತ್ರಿ 7:30ಕ್ಕೆ ಶ್ರೀ ಚಂದ್ರಮೌಳೇಶ್ವರ ಪೂಜೆ ನೆರವೇರಿಸಲಿದ್ದಾರೆ.

ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ: ಏ. 4 ರ ಬೆಳಗ್ಗೆ 8.30 ರಿಂದ ಮಧ್ಯಾಹ್ನ 1ರ ವರೆಗೆ ಶಂಕರ ಮಠದ ಶ್ರೀ ಮಹಾಗಣಪತಿ, ಶ್ರೀ ಸತ್ಯನಾರಾಯಣ ಮತ್ತು ಶ್ರೀ ಶಂಕರಾಚಾರ್ಯರ ಸನ್ನಿಧಿಗಳಲ್ಲಿ ಕುಂಭಾಭಿಷೇಕ, ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ ನೆರವೇರಲಿದೆ. ಶ್ರೀ ವಿಧುಶೇಖರ ಭಾರತೀ ತೀರ್ಥ ಜಗದ್ಗುರುಗಳು ಸಾರ್ವಜನಿಕ ದರ್ಶನ, ಪಾದಪೂಜೆ ಮತ್ತು ಭಿಕ್ಷಾವಂದನೆ ಸಾನ್ನಿಧ್ಯ ವಹಿಸಿ ಭಕ್ತ ವೃಂದವನ್ನು ಆಶೀರ್ವದಿಸಲಿದ್ದಾರೆ. ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಮರ್ಪಿಸಲಿದ್ದಾರೆ.

5ರಂದು ಗುರುವಂದನಾ ಕಾರ್ಯಕ್ರಮ: ಏ. 5ರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 1 ರ ವರೆಗೆ ಶಂಕರ ಮಠದ ಆವರಣದಲ್ಲಿ ಶ್ರೀ ಶಾರದಾಂಬಾ ಹಾಗೂ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಮಹಾಸ್ವಾಮಿಗಳ ಸನ್ನಿಧಿಯಲ್ಲಿ ಕುಂಭಾಭಿಷೇಕ ಮತ್ತು ಶಿಖರ ಕುಂಭಾಭಿಷೇಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಲಿವೆ. ಸಂಜೆ 5.30ಕ್ಕೆ ಮಠದ ಆವರಣದ ವಿದ್ಯಾಶಂಕರ ನಿಲಯ ಕಲ್ಯಾಣ ಮಂಟಪದಲ್ಲಿ ‘ಗುರುವಂದನಾ’ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತ ಸರ್ಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್ ಆಗಮಿಸಲಿದ್ದಾರೆ. ವಿವಿಧ ಸಂಘ ಸಂಸ್ಥೆ ಪ್ರಮುಖರು, ನಗರದ ಗಣ್ಯರು, ಸಾರ್ವಜನಿಕರು ಮತ್ತು ಮಠದ ಭಕ್ತರು ಸಾಕ್ಷಿಯಾಗಲಿದ್ದಾರೆ.

Next Article