ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯ
ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಬಹಳ ದೊಡ್ಡದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಪ್ರಧಾನಿ ಮೋದಿ 116ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿ, ಯುವ ಮನಸ್ಸುಗಳು ಒಗ್ಗೂಡಿ ದೇಶದ ಭವಿಷ್ಯದ ಕುರಿತು ಯೋಚಿಸಿದಾಗ, ವಿಚಾರ ವಿನಿಮಯ ಮಾಡಿಕೊಂಡಾಗ ಖಂಡಿತವಾಗಿಯೂ ಸೂಕ್ತ ಮಾರ್ಗಗಳು ಹೊರಹೊಮ್ಮುತ್ತವೆ. ಮುಂದಿನ ವರ್ಷ ಸ್ವಾಮಿ ವಿವೇಕಾನಂದರ ೧೬೨ನೇ ಜಯಂತಿ. ಈ ಬಾರಿ ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಜನವರಿ ೧೧-೧೨ರಂದು ದೆಹಲಿಯ ಭಾರತ ಮಂಟಪದಲ್ಲಿ ಯುವ ವಿಚಾರಗಳ ಮಹಾಕುಂಭ ನಡೆಯಲಿದ್ದು, ಈ ಉಪಕ್ರಮದ ಹೆಸರು ’ವಿಕಸಿತ ಭಾರತ Young Leaders Dialogue' ಎಂಬುದಾಗಿದೆ ಎಂದರು.
ಮೈಸೂರಿನ ಅರ್ಲಿ ಬರ್ಡ್ ಸಂಸ್ಥೆಯ ಶ್ಲಾಘನೆ: ಮೈಸೂರಿನ ಅರ್ಲಿ ಬರ್ಡ್ ಸಂಸ್ಥೆಯ ಮಕ್ಕಳಿಗೆ ಪಕ್ಷಿ, ಪ್ರಕೃತಿಯ ಮಹತ್ವವನ್ನು ತಿಳಿಸುವ ಕೆಲಸ ಮಾಡುತ್ತಿದೆ. ಮಕ್ಕಳಿಗೆ ನೇಚರ್ ಎಜ್ಯುಕೇಶನ್ ನೀಡುತ್ತಿರುವ ಸಂಸ್ಥೆ ಇದಾಗಿದ್ದು, ನಗರದಲ್ಲಿರುವ ಮಕ್ಕಳನ್ನು ಹಳ್ಳಿಗಳಿಗೆ ಕರೆದೊಯ್ದು ಪಕ್ಷಿ ಸಂಕುಲದ ಪರಿಚಯ ಮಾಡಿಕೊಡುತ್ತಿದ್ದು ಸಂಸ್ಥೆಯು ವಿಶೇಷ ಗ್ರಂಥಾಲಯ, ಸ್ಟೋರಿ ಬುಕ್ಗಳನ್ನು ಅಲ್ಲಿರಿಸಿದೆ ಎಂದರು.