ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯ

03:20 PM Nov 24, 2024 IST | Samyukta Karnataka

ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಬಹಳ ದೊಡ್ಡದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಪ್ರಧಾನಿ ಮೋದಿ 116ನೇ ಮನ್ ​ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿ, ಯುವ ಮನಸ್ಸುಗಳು ಒಗ್ಗೂಡಿ ದೇಶದ ಭವಿಷ್ಯದ ಕುರಿತು ಯೋಚಿಸಿದಾಗ, ವಿಚಾರ ವಿನಿಮಯ ಮಾಡಿಕೊಂಡಾಗ ಖಂಡಿತವಾಗಿಯೂ ಸೂಕ್ತ ಮಾರ್ಗಗಳು ಹೊರಹೊಮ್ಮುತ್ತವೆ. ಮುಂದಿನ ವರ್ಷ ಸ್ವಾಮಿ ವಿವೇಕಾನಂದರ ೧೬೨ನೇ ಜಯಂತಿ. ಈ ಬಾರಿ ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಜನವರಿ ೧೧-೧೨ರಂದು ದೆಹಲಿಯ ಭಾರತ ಮಂಟಪದಲ್ಲಿ ಯುವ ವಿಚಾರಗಳ ಮಹಾಕುಂಭ ನಡೆಯಲಿದ್ದು, ಈ ಉಪಕ್ರಮದ ಹೆಸರು ’ವಿಕಸಿತ ಭಾರತ Young Leaders Dialogue' ಎಂಬುದಾಗಿದೆ ಎಂದರು.
ಮೈಸೂರಿನ ಅರ್ಲಿ ಬರ್ಡ್​ ಸಂಸ್ಥೆಯ ಶ್ಲಾಘನೆ: ಮೈಸೂರಿನ ಅರ್ಲಿ ಬರ್ಡ್​ ಸಂಸ್ಥೆಯ ಮಕ್ಕಳಿಗೆ ಪಕ್ಷಿ, ಪ್ರಕೃತಿಯ ಮಹತ್ವವನ್ನು ತಿಳಿಸುವ ಕೆಲಸ ಮಾಡುತ್ತಿದೆ. ಮಕ್ಕಳಿಗೆ ನೇಚರ್ ಎಜ್ಯುಕೇಶನ್ ನೀಡುತ್ತಿರುವ ಸಂಸ್ಥೆ ಇದಾಗಿದ್ದು, ನಗರದಲ್ಲಿರುವ ಮಕ್ಕಳನ್ನು ಹಳ್ಳಿಗಳಿಗೆ ಕರೆದೊಯ್ದು ಪಕ್ಷಿ ಸಂಕುಲದ ಪರಿಚಯ ಮಾಡಿಕೊಡುತ್ತಿದ್ದು ಸಂಸ್ಥೆಯು ವಿಶೇಷ ಗ್ರಂಥಾಲಯ, ಸ್ಟೋರಿ ಬುಕ್​ಗಳನ್ನು ಅಲ್ಲಿರಿಸಿದೆ ಎಂದರು.

Tags :
#NarenderModi‌modimysorePM Modi Mann Ki Baatradio
Next Article