For the best experience, open
https://m.samyuktakarnataka.in
on your mobile browser.

ಅಮಿತ್ ಶಾ ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ

04:08 PM Feb 11, 2024 IST | Samyukta Karnataka
ಅಮಿತ್ ಶಾ ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರ ಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟ ಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ಆದರೆ ಕೇಂದ್ರ ಸರ್ಕಾರದವರು ಅನುಮತಿ ನೀಡದೇ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದರು.
ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು
ನಿರ್ಮಲಾ ಸೀತಾರಾಮನ್ ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗ ಅವರು ಅವರ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದ ದೇವೇಗೌಡರು ಈಗೇನು ಹೆಳುತ್ತಿದ್ದಾರೆ. ಅವರು ಯಜಮಾನರು, ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದರು.