ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪೂಂಜಾ

06:15 PM Dec 05, 2023 IST | Samyukta Karnataka

ದಕ್ಷಿಣ ಕನ್ನಡ: ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣದ ವಿಷಯವನ್ನು ಬಿಜೆಪಿ ಶಾಸಕ ಹರೀಶ್​​ ಪೂಂಜಾ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಸದನದಲ್ಲಿ ಶಾಸಕರು ಪಕ್ಷಾತೀತವಾಗಿ ಆಗ್ರಹಿಸಿದರು.
ಬಿಜೆಪಿ ಶಾಸಕ ಹರೀಶ್​​ ಪೂಂಜಾ ವಿಷಯ ಪ್ರಸ್ತಾಪಿಸಿದ್ದು, ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಆದರೆ ಈ ವೇಳೆ ಬರಗಾಲ ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಯು.ಟಿ. ಖಾದರ್​​ ಹೇಳಿದರು. ಇದರಿಂದಾಗಿ ಕೋಪಗೊಂಡ ಶಾಸಕ ಪೂಂಜಾ ಸದನದ ಬಾವಿಗಿಳಿದು ಪ್ರತಿಭಟನೆ ಮುಂದಾದರು. ಇವರೊಂದಿಗೆ ಜೆಡಿಎಸ್​, ಬಿಜೆಪಿ ಸದಸ್ಯರು ಕೂಡ ಪ್ರತಿಭಟನೆಗೆ ಮುಂದಾದರು. ಬಳಿಕ ಹಕ್ಕುಬಾಧ್ಯತಾ ಸಮಿತಿಗೆ ಸ್ಪೀಕರ್ ಖಾದರ್ ಶಿಫಾರಸು ಮಾಡಿದ್ದಾರೆ.​ ಅರಣ್ಯ ಇಲಾಖೆಯ ಮೂವರು ಅಧಿಕಾರಿಗಳ ಅಮಾನತಿಗೆ ಆಗ್ರಹಿಸಲಾಯಿತು. ಶಾಸಕ ಹರೀಶ್​ ಪೂಂಜಾ ವಿರುದ್ಧ ಪ್ರಕರಣ ವಾಪಸ್​​ಗೆ ಬಿಜೆಪಿ ಸದಸ್ಯರು ಆಗ್ರಹಿಸಿದರು. ಆದರೆ, ಸಚಿವ ಈಶ್ವರ ಖಂಡ್ರೆ ಪ್ರಕರಣವೇ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Next Article