ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ
ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ
ಬೆಂಗಳೂರು: ಶಿರೂರು, ವಯನಾಡ್ ಭೂಕುಸಿತ ರಾಜ್ಯಕ್ಕೆ ಎಚ್ಚರಿಕೆ ಗಂಟೆ ಆಗಿದ್ದು ಪಶ್ಚಿಮ ಘಟ್ಟದ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಅರಣ್ಯ ಖಾತೆ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು ರಾಜ್ಯದ ಪಶ್ಚಿಮ ಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಸೂಚಿಲಾಗಿದೆ ಎಂದರು.