ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಅನುಮತಿ ಖಡ್ಡಾಯ
ಬೆಂಗಳೂರು: ಅರಣ್ಯದಲ್ಲಿ ಪ್ರದೇಶದಲ್ಲಿ ಚಿತ್ರೀಕರಣ ಮಾಡುವವರಿಗೆ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ.
ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ
ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು’ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಸಿನಿಮಾ ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.