ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅರಣ್ಯ ಭೂಮಿ ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ

11:02 AM Aug 14, 2024 IST | Samyukta Karnataka

ಉತ್ತರ ಕನ್ನಡದ ಶಿರೂರು ಮತ್ತು ವಯನಾಡಿನಲ್ಲಿ ಗುಡ್ಡ ಕುಸಿತ ಆದ ಬಳಿಕ ನೂರಾರು ಜನರು ಮೃತಪಟ್ಟಿರುವ ದಾರುಣ ಘಟನೆಯ ಬಳಿಕವೂ ನಾವು ಅರಣ್ಯ, ಪ್ರಕೃತಿ ಪರಿಸರ ಉಳಿಸದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ

ಅರಣ್ಯ ಭೂಮಿಯನ್ನು ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಬಳಿಕ ಅಲ್ಲಿ ವೃಕ್ಷೋಧ್ಯಾನ ನಿರ್ಮಿಸಲಾಗುವುದು. ಕುಮಾರಸ್ವಾಮಿ ಅವರೇ ಎಚ್.ಎಂ.ಟಿ. ವಶದಲ್ಲಿರುವ ಜಮೀನು ಪಡೆದು ಯಾರಿಗೆ ಮಾರುತ್ತೀರಿ ಎಂದು ಕೇಳಿದ್ದೀರಿ. ಅರಣ್ಯ ಭೂಮಿ ಮಾರಾಟ ಮಾಡಿರುವುದು ಈಗ ನಿಮ್ಮ ಇಲಾಖಾ ವ್ಯಾಪ್ತಿಯಲ್ಲಿರುವ ಎಚ್.ಎಂ.ಟಿ.ಯೇ ಹೊರತು ಅರಣ್ಯ ಇಲಾಖೆ ಅಲ್ಲ. ಬೆಂಗಳೂರಿನ ಪ್ರಮುಖ ಭಾಗದಲ್ಲಿರುವ ಪೀಣ್ಯ ಜಾಲಹಳ್ಳಿ ಅರಣ್ಯ ಜಮೀನು ಮರು ವಶಕ್ಕೆಪಡೆದು ಶುದ್ಧ ಉಸಿರಾಟಕ್ಕೊಂದು ತಾಣ (ಲಂಗ್ ಸ್ಪೇಸ್) ನಿರ್ಮಾಣ ಮಾಡುವ ಉದ್ದೇಶ ನನ್ನದಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ರಿಯಲ್ ಎಸ್ಟೇಟ್ ಸಂಸ್ಥೆಯಂತೆ ವರ್ತಿಸುತ್ತಿದೆ. 1997ರಿಂದ 2011ರವರೆಗೆ ಎಚ್.ಎಂ.ಟಿ. ಸಂಸ್ಥೆ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯನ್ನು ಅಕ್ರಮವಾಗಿ ಡಾಲರ್ಸ್ ಕನ್ ಸ್ಟ್ರಕ್ಷನ್ಸ್ ಅಂಡ್ ಎಂಜಿನಿಯರ್ಸ್ ಪ್ರೈ.ಲಿ., ಯು.ಎಸ್. ಸ್ಟೀಲ್ ಕಂಪನಿ, ಸಿಲ್ವರ್ ಲೈನ್ ಎಸ್ಟೇಟ್ಸ್, ಮನೆ ಕನ್ ಸ್ಟ್ರಕ್ಷನ್ಸ್ ಲಿ, ಎಂ.ಎಂ.ಆರ್. ಕನ್ ಸ್ಟ್ರಕ್ಷನ್ಸ್, ಬ್ರಿಗೇಡ್ ಎಂಟರ್ ಪ್ರೈಸಸ್, ಬಾಗಮನೆ ಡೆವಲಪರ್ಸ್ ಪ್ರೈ.ಲಿ. ಸೇರಿದಂತೆ ಹಲವು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ 165 ಎಕರೆ ಭೂಮಿಯನ್ನು 313 ಕೋಟಿಗೂ ಹೆಚ್ಚು ಹಣಕ್ಕೆ ಮಾರಾಟ ಮಾಡಿದೆ. ಪರಿಸರ ಹೋರಾಟಗಾರರೊಬ್ಬರು ಕಳೆದ ಜುಲೈ 11ರಂದು ತಮ್ಮ ಕಚೇರಿಗೆ ನೀಡಿದ ದೂರು ಆಧರಿಸಿ, ಅಧಿಕಾರಿಗಳ ಸಭೆ ಕರೆದು ಚರ್ಚಿಸಿದಾಗ ಸತ್ಯ ಹೊರಬಿತ್ತು. ಹೀಗಾಗಿ ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896 ಜೂನ್ 11ರಲ್ಲೇ ಅಧಿಸೂಚಿತ ಅರಣ್ಯ ಗೆಜೆಟ್ ಆಗಿದೆ. ಈ ಭೂಮಿಯನ್ನು 1963ರಲ್ಲಿ ಎಚ್.ಎಂ.ಟಿ.ಗೆ ದಾನ ನೀಡಿರುವುದಾಗಿ ಹೇಳಲಾಗಿದೆ. ಈಗ ನೀವು(ಕುಮಾರಸ್ವಾಮಿ) ಅವರು ಭೂಮಿಯನ್ನು ಎಚ್.ಎಂ.ಟಿ. ಸಂಸ್ಥೆ ಖರೀದಿಸಿರುವುದಾಗಿ ಹೇಳುತ್ತಿದ್ದೀರಿ. ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಮಾಡದೆ, 1980ರ ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 2ರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಮಾರಾಟ ಮಾಡಲು ಅಥವಾ ದಾನ ಮಾಡಲು ಕಾನೂನಿನಲ್ಲಿ ಅವಕಾಶವೇ ಇರುವುದಿಲ್ಲ. ರಾಜ್ಯಕ್ಕೆ ಬೆಳಕು ನೀಡಿ, ಪ್ರಸ್ತುತ ಕತ್ತಲಲ್ಲಿ ಬದುಕು ಕಳೆಯುವಂತಾಗಿರುವ ಶರಾವತಿ ಸಂತ್ರಸ್ತರಿಗೆ ಭೂಮಿ ನೀಡಿರುವ ಕುರಿತಂತೆ ರಾಜ್ಯ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಖ್ಯೆ 43037-2019ಕ್ಕೆ ಸಂಬಂಧಿಸಿದಂತೆ ಮಾರ್ಚ್ 4, 2021ರಂದು ಬಂದಿರುವ ತೀರ್ಪು ಇದನ್ನು ಸ್ಪಷ್ಟಪಡಿಸುತ್ತದೆ. ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ Once a Forest is Always a Forest – Environment is more important than civil rights ಎಂದು ಅಭಿಪ್ರಾಯಪಟ್ಟಿದೆ, ಇದು ಅರಣ್ಯ ಅಲ್ಲದಿದ್ದರೆ ಏಕೆ ಮಧ್ಯಂತರ ಅರ್ಜಿ (IA) ಹಾಕುತ್ತಿದ್ದರು ?

ಮಾನ್ಯ ಕುಮಾರಸ್ವಾಮಿ ಅವರೇ ನಾನು ಹಿಂದೆಯೂ ದ್ವೇಷದ ರಾಜಕೀಯ ಮಾಡಿಲ್ಲ, ಮುಂದೆಯೂ ಮಾಡಲ್ಲ. ನಾನು ಯಾವುದೇ ಪೂರ್ವಾಗ್ರಹ ಪೀಡಿತನಾಗಿ ಎಚ್.ಎಂ.ಟಿ. ಭೂಮಿ ವಿಚಾರ ಪ್ರಸ್ತಾಪಿಸಿಲ್ಲ. ಬದಲಾಗಿ ತಮಗೆ ಬಂದ ದೂರಿನ ಮೇಲೆ ಸಚಿವನಾಗಿ ಕ್ರಮ ವಹಿಸಿದ್ದೇನೆ. ತಾವು ಅರಣ್ಯ ಸಚಿವನಾಗಿ ಅಧಿಕಾರ ವಹಿಸಿಕೊಂಡ ತರುವಾಯ, ಅರಣ್ಯ ವಿಸ್ತರಣೆ ಮತ್ತು ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸುವ ನಿಟ್ಟಿನಲ್ಲಿ ಶ್ರಮ ವಹಿಸುತ್ತಿದ್ದೇನೆ. ಬೆಂಗಳೂರಿನ ಕೊತ್ತನೂರಿನಲ್ಲಿ ಸುಮಾರು 500 ಕೋಟಿ ರೂ. ಬೆಲೆ ಬಾಳುವ 17.34 ಎಕರೆ, ಬಿ.ಎಂ. ಕಾವಲಿನಲ್ಲಿ ಸುಮಾರು 100 ಕೋಟಿ ರೂ.ಮೌಲ್ಯದ 15 ಎಕರೆ, ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲಿನಲ್ಲಿ 200 ಕೋಟಿ ರೂ.ಮೌಲ್ಯದ 18 ಎಕರೆ, ತುರಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು 50 ಕೋಟಿ ರೂ. ಬೆಲೆ ಬಾಳುವ 7 ಎಕರೆ ಸೇರಿದಂತೆ ಒಟ್ಟು 101 ಎಕರೆ 20 ಗುಂಟೆ ಜಮೀನು ವಶಪಡಿಸಿಕೊಳ್ಳಲಾಗಿದೆ.

ಉತ್ತರ ಕನ್ನಡದ ಶಿರೂರು ಮತ್ತು ವಯನಾಡಿನಲ್ಲಿ ಗುಡ್ಡ ಕುಸಿತ ಆದ ಬಳಿಕ ನೂರಾರು ಜನರು ಮೃತಪಟ್ಟಿರುವ ದಾರುಣ ಘಟನೆಯ ಬಳಿಕವೂ ನಾವು ಅರಣ್ಯ, ಪ್ರಕೃತಿ ಪರಿಸರ ಉಳಿಸದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.

Tags :
#Bjp#Landslidecongress
Next Article