ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅರ್ಜುನನ ನಡಿಗೆ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ

07:47 PM Dec 04, 2023 IST | Samyukta Karnataka

ಬೆಂಗಳೂರು: ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿ ಅರ್ಜುನ ಸಾವನ್ನಪ್ಪಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು. ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ. ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಬರೆದುಕೊಂಡಿದ್ದಾರೆ.

Next Article