ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅರ್ಥಹೀನ ಪ್ರಶ್ನೆ ಕೇಳಿ ನಿಮ್ಮ ಸ್ಥಾನದ ಗೌರವ ಕಳೆದುಕೊಳ್ಳಬೇಡಿ

04:07 PM Aug 05, 2024 IST | Samyukta Karnataka

ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ

ಬೆಂಗಳೂರು: ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳ ನಾಯಕರಿಗೆ ಎಚ್ಚರಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಭದಲ್ಲಿ ಪೋಸ್ಟ್‌ ಮಾಡಿರುವ ಅವರು ಸನ್ಮಾನ್ಯ ಆರ್‌ ಅಶೋಕ್‌ ಅವರೇ, ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಇಲ್ಲವೇ ನಿಮ್ಮ ಕರ್ನಾಟಕ ಬಿಜೆಪಿ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್.ಐ.ಟಿ ಮುಂದೆ ಹೋಗಿ ಕೇಳಿ, ಇಲ್ಲವೇ ಹೇಳಿ. ಇದನ್ನು ಬಿಟ್ಟು ಹಾದಿಬೀದಿಯಲ್ಲಿ ಮಾತನಾಡುವವರಂತೆ, ತಾವೇ ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ, ನಮಗೆ ಪ್ರಶ್ನೆ ಕೇಳುವ ಮೊದಲು ನಿಮ್ಮದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾ‍ಳ್ ಅವರು ನಿರಂತರವಾಗಿ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ ವಿರುದ್ಧ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ. ಭ್ರಷ್ಟಾಚಾರ, ವಿದ್ರೋಹ ಮತ್ತು ಸ್ವಜನಪಕ್ಷಪಾತವೂ ಸೇರಿದಂತೆ ಯತ್ನಾಳ್ ಅವರು ಮಾಡುತ್ತಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಇಂತಹ ಆರೋಪಗಳನ್ನು ಮಾಡಿದ ನಂತರವೂ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮಕೈಗೊಳ್ಳದಿರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶ ಇರುವುದನ್ನು ಪಕ್ಷದ ಹೈಕಮಾಂಡ್ ಕೂಡಾ ಒಪ್ಪಿಕೊಂಡಂತೆ ಕಾಣುತ್ತಿದೆ ಎಂದಿದ್ದಾರೆ.

Tags :
#Bjp#BJPJDSPadayatre#BJPScams#ValmikiBoardcongress
Next Article