ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನ
ಧಾರವಾಡ : ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ
ಇಂದಿನಿಂದ ಸೆಪ್ಟೆಂಬರ್ 24 ರವರೆಗೆ ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ “ಕೃಷಿ ಮೇಳ-2024” ರಲ್ಲಿ ಭಾಗವಹಿಸಿ, "ಬೀಜ ಮೇಳ-2024" ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು ಹವಾಮಾನ ಬದಲಾವಣೆಯ ವಿವಿಧ ಅಂಶಗಳ ಕುರಿತು ರೈತರಿಗೆ ಮಾಹಿತಿ ನೀಡುವುದು ಕೃಷಿ ಮೇಳದ ಉದ್ದೇಶವಾಗಿದ್ದು, ‘ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಧಾರವಾಡ ಕೃಷಿ ಮೇಳ 2024 ನಡೆಯಲಿದೆ. ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದ್ದು, ಮೇಳದಲ್ಲಿ ಮೊದಲ ಬಾರಿಗೆ ‘ಸ್ಟಾರ್ಟ್ ಅಪ್ ಪೆವಿಲಿಯನ್’ ವ್ಯವಸ್ಥೆಯನ್ನೂ ಮಾಡಲಾಗಿದೆ. ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮಳಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಬೀಜ ಪೂರೈಕೆ ಸರಪಳಿಯಲ್ಲಿ ಕಂಡುಬರುವ ಅಡೆತಡೆಗಳನ್ನು ನಿಭಾಯಿಸಲು ಬೀಜ ಮೇಳ ಕೂಡ ಆಯೋಜಿಸಿರುವುದು, ಕೃಷಿಕರಿಗೆ ನಿಜಕ್ಕೂ ಸಹಾಯಕಾರಿಯಾಗಿದೆ ಎಂದರು.