ಅವರು ಈಗ ಮಂಕಾಗಿ ಕುಳಿತಿರುವುದೇಕೆ?
ಬೆಂಗಳೂರು: ತಮ್ಮ ಸರ್ಕಾರದ ಬಗ್ಗೆ ಒಂದೇ ಒಂದು ಭ್ರಷ್ಟಾಚಾರದ ಆರೋಪ ಬಂದರೆ ಹೇಳಿ ಎನ್ನುತ್ತಿದ್ದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಮಂಕಾಗಿ ಕುಳಿತಿರುವುದೇಕೆ? ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಪ್ರಶ್ನಿಸಿದ್ದಾರೆ.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಇಂದು ವಾಲ್ಮೀಕಿ ನಿಗಮದ ಅಧಿಕಾರಿ ಸಾವಿನ ಪ್ರಕರಣದ ವಿಚಾರವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಖಜಾನೆ ಲೂಟಿ ಮಾಡುವುದನ್ನೇ ಕಾಯಕ ಮಾಡಿಕೊಂಡಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದ ವಂಚನೆಯ ವಿಚಾರವಾಗಿ ಯೂನಿಯನ್ ಬ್ಯಾಂಕ್ ಸಿಬಿಐಗೆ ಪತ್ರ ಬರೆದು ತನಿಖೆಗೆ ಕೋರಿದೆ. ತಮ್ಮ ಸರ್ಕಾರದ ಬಗ್ಗೆ ಒಂದೇ ಒಂದು ಭ್ರಷ್ಟಾಚಾರದ ಆರೋಪ ಬಂದರೆ ಹೇಳಿ ಎನ್ನುತ್ತಿದ್ದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಮಂಕಾಗಿ ಕುಳಿತಿರುವುದೇಕೆ?
ಈ ಸರ್ಕಾರ ಬಂದ ಮೇಲೆ ಬರೀ ಡೆತ್ ನೋಟ್ ಗಳೇ ಬರುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲೇ KRIDLನಿಂದ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಗುತ್ತಿಗೆದಾರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
"ನಿತ್ಯ ಲೂಟಿ"ಯೇ ಕಾಂಗ್ರೆಸ್ ಸರ್ಕಾರದ ಧ್ಯೇಯವಾಕ್ಯವಾಗಿದೆ. ಹಗಲು ದರೋಡೆಕೋರರೇ ತುಂಬಿ ತುಳುಕುತ್ತಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ಮಾರಕ ಎಂದರು.