ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅವಳಿನಗರಕ್ಕೆ ಖಡಕ್ ಪೊಲೀಸ್ ಅಧಿಕಾರಿ ಕೊಡಿ

11:09 AM May 16, 2024 IST | Samyukta Karnataka

ಹುಬ್ಬಳ್ಳಿ : ಹುಬ್ಬಳ್ಳಿ - ಧಾರವಾಡ ಮಹಾನಗರದಲ್ಲಿ ಕಳೆದ ಒಂದೆರಡು ತಿಂಗಳಿಂದ ನಡೆಯುತ್ತಿರುವ ಅಪರಾಧ ಕೃತ್ಯ ಆಧರಿಸಿ ಬಿಜೆಪಿ ಮುಖಂಡರು, ಸಾರ್ವಜನಿಕರು ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನೇಹಾ ಹಿರೇಮಠ ಕೊಲೆ ನಡೆದಾಗಲಂತೂ ಬೀದಿಗಿಳಿದು ಪ್ರತಿಭಟಿಸಿದ್ದರು.
ಆದರೆ, ಬುಧವಾರ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಕೊಲೆಯಾದ ಬಳಿಕ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಬೇಸರ ವ್ಯಕ್ತಪಡಿಸಿದ್ದು ಕಾನೂನು ಸುವ್ಯವಸ್ಥೆ ಕುಸಿದಿದೆ.ಹಿರಿಯ ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ದನಿ ಎತ್ತಿರುವುದು ಮಹತ್ವ ಪಡೆದಿದೆ.
ಹೀಗೆ ದನಿ ಎತ್ತಿರುವವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು.
ಈ ಕುರಿತು ಗೃಹ ಸಚಿವ ಡಾ.ಜಿ ಪರಮೇಶ್ವರ ಅವರಿಗೆ ಪತ್ರ ಬರೆದಿರುವ ಅವರು, ಹುಬ್ಬಳ್ಳಿ- ಧಾರವಾಡ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಅಪರಾಧ ಸಂಖ್ಯೆ ಹೆಚ್ಚುತ್ತಿದ್ದು, ಅವಳಿನಗರದ ಪೊಲೀಸ್ ವೈಫಲ್ಯದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಹೀಗಾಗಿ, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಿಂದ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ವಿದ್ಯಾರ್ಥಿನಿ ನೇಹಾ ಹಿರೇಮಠ ಸಾವಿನ ನಂತರ ವಿದ್ಯಾಭ್ಯಾಸ, ಉದ್ಯೋಗಗಳಿಗೆ ಹೆಣ್ಣು ಮಕ್ಕಳನ್ನು ಕಳಿಸಲು ಪಾಲಕರು ಹಾಗೂ ಕುಟುಂಬಸ್ಥರು ಹಿಂಜರಿಯುವ ಸನ್ನಿವೇಶ ನಿರ್ಮಾಣವಾಗಿದೆ. ಪದೇ ಪದೇ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಯುವತಿಯರ ಕೊಲೆ ಪ್ರಕರಣಗಳಿಂದ ಮಹಿಳೆಯರು ಮತ್ತು ಮಕ್ಕಳು ಮತ್ತಷ್ಟು ಭಯಭೀತರಾಗಿ ಜೀವನ ನಡೆಸುವ ಸಂದರ್ಭ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮುಖ್ಯವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ,ರೌಡಿಗಳನ್ನು ಮಟ್ಟ ಹಾಕುವಲ್ಲಿ, ಪುಂಡ ಪೋಕರಿಗಳನ್ನು ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಶೀಘ್ರವೇ ಅವಳಿನಗರಕ್ಕೆ ಖಡಕ್ ಅಧಿಕಾರಿಗಳನ್ನು ನೇಮಕ ಮಾಡಿ ಕಾನೂನು ಸುವವ್ಯಸ್ಥೆ ಕಾಪಾಡಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

Next Article