For the best experience, open
https://m.samyuktakarnataka.in
on your mobile browser.

ಆಗಸ್ಟ್ ೧೩ರತನಕ ಭಾರಿ ಮಳೆ

11:13 PM Aug 09, 2024 IST | Samyukta Karnataka
ಆಗಸ್ಟ್ ೧೩ರತನಕ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ ೧೩ರತನಕ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದ್ದು, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಾತ್ರ ಆಗಸ್ಟ್ ೧೩ರ ವರೆಗೆ ಭಾರಿ ಮಳೆ ಆಗಲಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಗದಗ, ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ಸಾಧಾರಣ ಮಳೆ ಆಗಲಿದೆ.
ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ಇಲ್ಲವಾದರೂ ಸಹ ದಿನವಿಡಿ ಮೋಡ ಕವಿದ ವಾತಾವರಣ ಇರಲಿದೆ. ಇನ್ನು ಆಗಸ್ಟ್ ಜೊತೆಗೆ ಸೆಪ್ಟೆಂಬರ್ ತಿಂಗಳಲ್ಲಿಯೂ ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಒಂದು ವೇಳೆ ಹೆಚ್ಚಿನ ಪ್ರಮಾಣದ ಮಳೆ ಸೆಪ್ಟೆಂಬರ್ ತಿಂಗಳಲ್ಲಿ ಸುರಿದರೆ ಕೃಷಿ ವಿಭಾಗದಲ್ಲಿ ದೊಡ್ಡ ನಷ್ಟವಾಗಲೂಬಹುದು.
ಮುಂದಿನ ೪ ದಿನ ಭಾರಿ ಮಳೆ
ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮುಂದಿನ ೪ ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಬಾಗಲಕೋಟೆ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಯಾದಗಿರಿಯಲ್ಲಿಯೂ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags :