ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿಯ ಆರೋಗ್ಯ ಸ್ಥಿರ

01:35 PM Apr 02, 2024 IST | Samyukta Karnataka

ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜರುಗಿದೆ. ಕೂಡಲೇ ಅವರನ್ನು ನಗರ್ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.

ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ವೈಯಕ್ತಿಕ ಕಾರಣಗಳಿಂದ ಇಂದು ಆತ್ಮಹತ್ಯೆಗೆ ಯತ್ನಿಸಿದ, ಇವರನ್ನು ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ನಿಗಾವಣಿಗಾಗಿ ಇವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

Next Article