For the best experience, open
https://m.samyuktakarnataka.in
on your mobile browser.

ಆಧುನಿಕ ಭಾರತ ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಕೊಡುಗೆ ಅಪಾರ

12:52 PM Nov 14, 2024 IST | Samyukta Karnataka
ಆಧುನಿಕ ಭಾರತ ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಕೊಡುಗೆ ಅಪಾರ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ನೆಹರೂರವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿ ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು. ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು. ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು. ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ. ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಮ್, ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅದಕ್ಕೆ ನೆಹರೂರವರು ಕಾರಣ ಎಂದರು.

Tags :