ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆಭರಣ ಕಳವು ಪ್ರಕರಣ: ಇಬ್ಬರು ಕಳ್ಳರ ಬಂಧನ

07:57 PM Jan 22, 2025 IST | Samyukta Karnataka

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಗ್ರಾಮದಲ್ಲಿ ಜ. 21ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ 7 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಗಂಗೊಳ್ಳಿ‌ ಪೊಲೀಸರು ಬಂಧಿಸಿದ್ದಾರೆ.
ತ್ರಾಸಿ ಬೀಚ್‌ ಬಳಿ ಮನೆಯೊಂದರ ಮೇಜಿನ ಮೇಲೆ ಇಟ್ಟಿದ್ದ ಬ್ಯಾಗ್‌ನ ಜಿಪ್‌ ತೆಗೆದು ಬ್ಯಾಗ್‌ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 16 ಗ್ರಾಂ ತೂಕದ ಬಳೆ ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 2 ಲಕ್ಷದ ಆಭರಣ ಕಳವಾಗಿದ್ದು ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಜ. 21ರಂದು ರಾತ್ರಿ 8 ಗಂಟೆ ಸುಮಾರಿಗೆ ಆರೋಪಿಗಳಾದ ಗುಜ್ಜಾಡಿ‌ ನಿವಾಸಿ ವಿನಾಯಕ(41), ಪ್ರಮೀಳಾ(30) ಎನ್ನುವರನ್ನು ವಶಕ್ಕೆ ಪಡೆದು ಆರೋಪಿಗಳು ಕಳವುಗೈದ 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Next Article