ಆರು ತಿಂಗಳ ಬಳಿಕ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ
10:34 AM Dec 17, 2024 IST
|
Samyukta Karnataka
ಬೆಂಗಳೂರು: ನಟಿ ಹಾಗೂ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಬೆಳಿಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಕರ್ನಾಟಕ ಹೈಕೋರ್ಟ್ ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕು ಮೂರು ದಿನವಾದರೂ ಪವಿತ್ರಾ ಗೌಡಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಶನಿವಾರ, ಭಾನುವಾರ ರಜೆ ಇದ್ದ ಹಿನ್ನೆಲೆ ಜಾಮೀನು ಪ್ರಕ್ರಿಯೆ ಡಿಸೆಂಬರ್ 16ರಂದು ನಡೆಯಿತು. ಇಂದು ಜೈಲಿಂದ ಹೊರಗೆ ಬಂದಿದ್ದಾರೆ. ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಸಮೀಪದ ದೇವಸ್ಥಾನಕ್ಕೆ ತೆರಳಿ ಪವಿತ್ರಾ ಪೂಜೆ ಸಲ್ಲಿಸಿದರು.
Next Article