ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ದೇವೇಗೌಡ ಡಿಸ್ಚಾರ್ಜ್
04:39 PM Feb 18, 2024 IST
|
Samyukta Karnataka
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಉಸಿರಾಟ ಸಮಸ್ಯೆಯಿಂದಾಗಿ 4 ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ.
Next Article