ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆರೋಪಿಗಳನ್ನು ಬಂಧಿಸಿದರೆ ಸಾಲದು

06:33 PM Mar 04, 2024 IST | Samyukta Karnataka

ಇಡೀ ಪ್ರಕರಣ ಕಾಂಗ್ರೆಸ್‌ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆ

ಬೆಂಗಳೂರು: ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ.

FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ?

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು. ಈ ಇಡೀ ಪ್ರಕರಣ ಕಾಂಗ್ರೆಸ್‌ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

Next Article