ಆಸ್ಪತ್ರೆಗೆ ದಾಖಲಾದ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್
10:43 AM Nov 26, 2024 IST | Samyukta Karnataka
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ್ ದಾಸ್ಗೆ ಅನಾರೋಗ್ಯದಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಅಪೋಲೋ ಆಸ್ಪತ್ರೆ ಆರೋಗ್ಯದ ಕುರಿತು ಅಪ್‌ಡೇಟ್ ನೀಡಿದ್ದು ಅವರಿಗೆ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದ್ದು, ತಮಿಳುನಾಡು ರಾಜಧಾನಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ, ಆತಂಕಕ್ಕೆ ಯಾವುದೇ ಕಾರಣವಿಲ್ಲ ಮತ್ತು ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ತಿಳಿಸಿದೆ.