ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಜಿಲ್ಲೆಯ ಯರಗಟ್ಟಿಯಲ್ಲಿರುವ ಮಹಿಳಾ ಪೂರಕ ಪೌಷ್ಠಿಕ ಆಹಾರ ಹಾಗೂ ತಯಾರಿಕಾ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧೀ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳೆ ನೇರಹೊಣೆ ವಹಿಸಬೇಕಾಗುತ್ತದೆ. ಇಲಾಖೆಯ ಯೋಜನೆಗಳ ಜಿಲ್ಲಾವಾರು ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದ ಅವರು, ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸಲಾಗುತ್ತಿರುವ ಎಂಎಸ್‍ಪಿಸಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಫೋಷಣ್ ಯೋಜನೆಯಡಿ ಹೆಚ್ಚು ಮಕ್ಕಳನ್ನು ನೋಂದಾಯಿಸಲು ತ್ವರಿತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಇಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಜಿಲ್ಲೆಯ ಇಲಾಖೆಯ ಅಧಿಕಾರಿಗಲೊಂದಿಗೆ ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿರುವ ಮಹಿಳಾ ಪೂರಕ ಪೌಷ್ಠಿಕ ಆಹಾರ ಹಾಗೂ ತಯಾರಿಕಾ ಕೇಂದ್ರಕ್ಕೆ (ಎಂ.ಎಸ್.ಪಿ.ಸಿ) ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದ್ದಾರೆ.