ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆ ಹಣವೆಲ್ಲಾ ಏನಾಯ್ತು?

11:29 AM Oct 26, 2024 IST | Samyukta Karnataka

ಬೆಂಗಳೂರು: ಪ್ರತಿ ವಾರ್ಡ್ ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ, ಆ ಹಣವೆಲ್ಲಾ ಏನಾಯ್ತು? ಎಂದು ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಝಣ-ಝಣಾ ಕಾಂಚಾಣದಲ್ಲಿ | ಕಾಂಗ್ರೆಸ್ ಸರ್ಕಾರದಲ್ಲಿ | ರಸ್ತೆ ಗುಂಡಿ ಮುಚ್ಚುವ ಹಣವೂ ಮಾಯ | ನಾಳೆ ರಸ್ತೆಯೂ ಮಾಯ | ಎಲ್ಲಾ ಮಾಯಾ ನಾಳೆ ನಾವೂ ಮಾಯ | ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಸಚಿವ ಡಿ. ಕೆ. ಶಿವಕುಮಾರ್‌ ಅವರೇ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ, ಆ ಹಣವೆಲ್ಲಾ ಏನಾಯ್ತು? ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರಿದಿರುವ ಯಾಮಸ್ವರೂಪಿ ರಸ್ತೆ ಗುಂಡಿಗಳನ್ನು ನೋಡಿದರೆ ಬಹುಶಃ ಆ ದುಡ್ಡೆಲ್ಲವೂ ತಮ್ಮ ಕಮಿಷನ್ ಪಾಲಾದಂತಿದೆ. ಅಥವಾ ಈಗ ಚನ್ನಪಟ್ಟಣ ಚುನಾವಣೆ ಖರ್ಚಿಗೆ ಆ ಹಣ ಸಾಗಿಸಿದ್ದೀರೋ? ಬ್ರ್ಯಾಂಡ್ ಬೆಂಗಳೂರು ಕಟ್ಟುವುದು ದೂರದ ಮಾತು ಸ್ವಾಮಿ, ಮೊದಲು ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ ಎಂದಿದ್ದಾರೆ.

Tags :
#ಆರ್‌ಅಶೋಕ್‌#ಕಾಂಗ್ರೆಸ್‌#ಡಿಕೆಶಿವಕುಮಾರ#ಬಿಜೆಪಿ#ಬೆಂಗಳೂರು#ಮಳೆಹಾನಿ
Next Article