For the best experience, open
https://m.samyuktakarnataka.in
on your mobile browser.

ಇಂದಿನಿಂದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!

12:28 PM Aug 13, 2024 IST | Samyukta Karnataka
ಇಂದಿನಿಂದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ದಿನಾಂಕ 13ರ ರಿಂದ 15ರ ಆಗಸ್ಟ್ 2024ರ ವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

ನಾಗಸಂದ್ರದಿಂದ ಮಾದಾವರ (BIEC) ವರೆಗಿನ ರೀಚ್-3ರ ವಿಸ್ಕೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದ್ದು ಇದರ ವಿವರ ಈ ಕೆಳಕಂಡಂತಿವೆ.

  1. ದಿನಾಂಕ 13ನೇ ಆಗಸ್ಟ್ 2024 ರಂದು - ಕೊನೆಯ ರೈಲು ಸೇವೆ ರಾತ್ರಿ 11.00 ಕ್ಕೆ ಬದಲಾಗಿ 10.00 ಗಂಟೆಯವರೆಗೆ.
  2. ದಿನಾಂಕ 14ನೇ ಆಗಸ್ಟ್ 2024 ರಂದು - ಬೆಳಿಗ್ಗೆ 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭ ಮತ್ತು ಕೊನೆಯ
    ರೈಲು ಸೇವೆ ರಾತ್ರಿ 11.00 ಕ್ಕೆ ಬದಲಾಗಿ 10.00 ಗಂಟೆಯವರೆಗೆ
  3. ದಿನಾಂಕ 15ನೇ ಆಗಸ್ಟ್ 2024 ರಂದು- ಬೆಳಿಗ್ಗೆ 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭ
    ನಾಗಸಂದ್ರ ನಿಲ್ದಾಣದಿಂದ ದಿನಾಂಕ 13 ಮತ್ತು 14ನೇ ಆಗಸ್ಟ್ 2024 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಗಂಟೆಯ ಬದಲಾಗಿ 10.00 ಗಂಟೆಗೆ ಕೊನೆಗೊಳ್ಳುತ್ತದೆ. ದಿನಾಂಕ 14 ಮತ್ತು 15ನೇ ಆಗಸ್ಟ್ 2024 ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು ಬೆಳಿಗ್ಗೆ 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 13 ಮತ್ತು 14ನೇ ಆಗಸ್ಟ್ 2024 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ದಿನಾಂಕ 14 ಮತ್ತು 15ನೇ ಆಗಸ್ಟ್ 2024 ರಂದು ಬೆಳಿಗ್ಗೆ 05.00 ಕ್ಕೆ ಪ್ರಾರಂಭವಾಗುತ್ತದೆ. ನೇರಳ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Tags :