For the best experience, open
https://m.samyuktakarnataka.in
on your mobile browser.

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

10:52 AM Nov 25, 2024 IST | Samyukta Karnataka
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಇಂದಿನಿಂದ ಡಿಸೆಂಬರ್ 20 ರವರೆಗೆ ನಡೆಯುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಆಡಳಿತಾರೂಡ ಎನ್ ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ. ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 26 ರಂದು ಸಂವಿಧಾನ ದಿನವಾಗಿ ಆಚರಿಸಲಾಗುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಆಚರಣೆ ನಡೆಯಲಿದೆ. ಸ್ಮರಣಾರ್ಥ ಸಂದರ್ಭದ ಹೊರತಾಗಿಯೂ, 'ಒಂದು ರಾಷ್ಟ್ರ ಒಂದು ಚುನಾವಣೆ' ಮತ್ತು ವಕ್ಸ್ ಆಸ್ತಿ ಕಾಯ್ದೆಗೆ ತಿದ್ದುಪಡಿಗಳು ಸೇರಿದಂತೆ ಹಲವಾರು ವಿವಾದಾತ್ಮಕ ಶಾಸನಾತ್ಮಕ ಪ್ರಸ್ತಾಪಗಳೊಂದಿಗೆ ಸರ್ಕಾರ ಮುಂದುವರಿಯುತ್ತಿರುವುದರಿಂದ ಸಂಸತ್ತಿನಲ್ಲಿ ರಾಜಕೀಯ ವಾತಾವರಣವು ಉಲ್ಬಣಗೊಳ್ಳುವ ನಿರೀಕ್ಷೆಯಿದೆ.ಇದರ ಜೊತೆಗೆ ಇತ್ತೀಚಿನ ಮಣಿಪುರ ಗಲಭೆ ವಿಷಯ, ಆಹಾರ ಧಾನ್ಯಗಳ ಬೆಲೆ ಏರಿಕೆ ಮತ್ತಿತರ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳು ವಿಪಕ್ಷಗಳು ಸಜ್ಜಾಗಿವೆ. ಹೀಗಾಗಿ ಮೊದಲ ದಿನದಿಂದಲೇ ಕಲಾಪಗಳು ಕಾವೇರುವ ನಿರೀಕ್ಷೆಯಿದೆ. ಈ ನಡುವೆ ಸುಗಮ ಕಲಾಪದ ನಿಟ್ಟಿನಲ್ಲಿ ವಿಪಕ್ಷಗಳ ಸಹಕಾರ ಕೋರಲು ಸರ್ಕಾರ ಭಾನುವಾರ ಸರ್ವಪಕ್ಷಗಳ ಸಭೆ ಆಯೋಜಿಸಿತ್ತು. ಈ ವೇಳೆ ವಿಪಕ್ಷಗಳು, ಅಧಿವೇಶನದ ಅವಧಿಯಲ್ಲಿ ಅದಾನಿ ಹಗರಣದ ಕುರಿತು ತನಿಖೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿವೆ.

Tags :