ಇಂದು ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ೬ನೇ ಘಟಿಕೋತ್ಸವ
ಹುಬ್ಬಳ್ಳಿ: ವಿದ್ಯಾನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ೬ನೇ ಘಟಿಕೋತ್ಸವವನ್ನು ನ.೬ ರಂದು ಡಾ. ಪ್ರಭಾಕರ ಕೋರೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಅಭಯ ಕರಂದೀಕರ್ ಉದ್ಘಾಟಿಸಲಿದ್ದಾರೆ ಎಂದು ಕುಲಪತಿ ಪ್ರೊ.ಪ್ರಕಾಶ ತೆವರಿ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.೧೬ ರಂದು ಬೆಳಗ್ಗೆ ೧೦:೩೦ಕ್ಕೆ ವಿವಿಯ ಆವರಣದಲ್ಲಿರುವ ಡಾ.ಪ್ರಭಾಕರ ಕೋರೆ ಸ್ಪೋರ್ಟ್ಸ್ ಅರೆನಾದಲ್ಲಿ ಪದವಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.
ಸ್ನಾತಕ ೧೩೬೭ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿಭಾಗದಿಂದ ೨೯೩ ಹಾಗೂ ೧೭ ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪಡೆದುಕೊಳ್ಳದ್ದಾರೆ. ಇದೇ ಸಂದರ್ಭದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮುಗಿಸಿ, ಶೈಕ್ಷಣಿಕ ವರ್ಷದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ೧೮ ಪದವೀಧರರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಅದೇ ರೀತಿ ೧೯ ವಿದ್ಯಾರ್ಥಿಗಳು ಬೆಳ್ಳಿಯ ಪದಕವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಅಲ್ಲದೆ, ಸಿವಿಲ್ ವಿಭಾಗದಲ್ಲಿ ಟಾಪರ್ ಆಗಿ ಹೊರ ಹೊಮ್ಮಿದ ವಿದ್ಯಾರ್ಥಿಗೆ ಡಾ.ಎಸ್.ಎಸ್. ಭಾವಿಕಟ್ಟಿ ಚಿನ್ನದ ಪದಕ ನೀಡಲಾಗುವುದು ಎಂದರು.
ಕೆಎಲ್‌ಇ ಸಂಸ್ಥೆಯ ಚೇರಮನ್ ಡಾ.ಪ್ರಭಾಕರ ಕೋರೆ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಸಹ ಕುಲಪತಿ ಪ್ರೊ. ಅಶೋಕ ಶೆಟ್ಟರ, ಡಾ. ಅರುಣಕುಮಾರ ನಂದಿ, ಡಾ. ಬಸವರಾಜ ಅನಾಮಿ ಪಾಲ್ಗೊಳ್ಳಲಿದ್ದಾರೆ ಎಂದರು.