For the best experience, open
https://m.samyuktakarnataka.in
on your mobile browser.

ಇಂದು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ 

09:53 AM Jul 05, 2024 IST | Samyukta Karnataka
ಇಂದು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ 

ಬೆಂಗಳೂರು: ಉತ್ತರ ಕರ್ನಾಟಕದ ಪ್ರಸಿದ್ಧ ಹಬ್ಬವೆನಿಸಿರುವ ಮಣ್ಣೆತ್ತಿನ ಅಮಾವಾಸ್ಯೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.
ಕುಂಬಾರರರು  ಮಣ್ಣಿನಿಂದಲೇ ಜೋಡೆತ್ತುಗಳನ್ನು ತಯಾರಿಸಿ ಮಾರುತ್ತಾರೆ. ಎತ್ತುಗಳಿಗೆ ಗೋದಲಿಯನ್ನೂ ಸಿದ್ಧಪಡಿಸಿ ಪ್ರತಿ ಮನೆ ಮನೆಯಲ್ಲಿ ಪೂಜೆ ಮಾಡುತ್ತಾರೆ. ಕಾರು ಹುಣ್ಣಿಮೆಯಲ್ಲಿ ಎತ್ತುಗಳನ್ನು  ಪೂಜಿಸಿ ಅದ್ಧೂರಿಯಿಂದ ಮೆರವಣಿಗೆ ಮಾಡುವ ಸಂಪ್ರದಾಯವಾದರೆ,  ಮಣ್ಣೆತ್ತಿನ ಅಮಾವಾಸ್ಯೆಯ ದಿನ ಮಣ್ಣಿನ ಎತ್ತುಗಳನ್ನು ಪೂಜೆ ಮಾಡುವ ಸಂಪ್ರದಾಯವಿದೆ.