ಇಂದು ಮೊದಲನೇ ಹಂತದ ಮತದಾನ ಆರಂಭ
09:26 AM Apr 19, 2024 IST
|
Samyukta Karnataka
102 ಕ್ಷೇತ್ರಗಳಲ್ಲಿ ಮತದಾನ ಆರಂಭ: 102 ಕ್ಷೇತ್ರಗಳ 16.63 ಕೋಟಿ ಮತದಾರರಿಂದ ಹಕ್ಕು ಚಲಾವಣೆ
ನವದೆಹಲಿ: ದೇಶದ ೧೦೨ ಲೋಕಸಭಾ ಕ್ಷೇತ್ರಗಳಿಗೆ ಮೊದಲನೇ ಹಂತದ ಮತದಾನ ಪ್ರಾರಂಭವಾಗಿದ್ದು. ಬೆಳಿಗ್ಗೆ ೭ ಗಂಟೆಯಿಂದಲೇ ಮತದಾನ ನಡೆಯುತ್ತಿದ್ದು, ದೇಶಾದ್ಯಂತ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನದಲ್ಲಿ ಇಂದು 1,625 ಅಭ್ಯರ್ಥಿಗಳಿಂದ ಅದೃಷ್ಟ ಪರೀಕ್ಷೆ ಎದುರಿಸಲಿದ್ದಾರೆ. ತಮಿಳುನಾಡಿನ ಎಲ್ಲಾ ೩೯ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನಡೆಯುತ್ತಿದೆ. ಉತ್ತರಪ್ರದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಇಂದು ೮ ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿದೆ. ಅರುಣಾಚಲ ಪ್ರದೇಶ, ಮಣಿಪುರ್, ಮೇಘಾಲಯದ ೨, ಛತ್ತೀಸ್‌ಗಢ್, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್, ಜಮ್ಮು-ಕಾಶ್ಮೀರ, ಲಕ್ಷದ್ವೀಪ, ಪುದುಚೇರಿಯ ತಲಾ ಒಂದು ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
Next Article