ಇಡಿ ಜನರ ವಿಶ್ವಾಸ ಕಳೆದುಕೊಂಡಿದೆ
ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಈ ರೀತಿಯ ನಡವಳಿಕೆಗಳಿಂದಾಗಿ ಇಡಿ ಸಂಸ್ಥೆ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದರು.
ಕಳೆದ ೧೦ ವರ್ಷದಲ್ಲಿ ಬಿಜೆಪಿಯವರ ಬಂಧನವಾಗಿದೆಯಾ. ವಿಪಕ್ಷ ನಾಯಕರು ಎಲ್ಲಿ ಇರುತ್ತಾರೋ ಅಲ್ಲಿ ಮಾತ್ರ ಇಡಿ, ಐಟಿ ಛೂ ಬಿಡ್ತಾರೆ. ಇಡಿ, ಸಿಬಿಐವರು ಬರ್ತಾರೆ. ಕೇಜ್ರಿವಾಲ್, ಸೊರೆನ್, ಡಿಕೆಶಿಯವರನ್ನು ಜೈಲಿಗೆ ಹಾಕಿದರು. ಯಡಿಯೂರಪ್ಪ, ವಿಜಯೇಂದ್ರ ಯಾಕೆ ಕಣ್ಣಿಗೆ ಕಾಣುವುದಿಲ್ಲ. ಈ ಕಾನೂನು ದುರ್ಬಳಕೆ ಆಗುತ್ತಿದೆ. ಹೇಗಾದರು ಸರಿ ಸಿಎಂ ಅವರನ್ನು ಸಿಕ್ಕಿಸಬೇಕು ಎಂದು ವ್ಯವಸ್ಥಿತವಾದ ಸಂಚು ನಡೆದಿದೆ. ಈ ಬಗ್ಗೆ ಯೋಜಿತವಾಗಿ ಪ್ಲಾನ್ ಮಾಡಲಾಗಿದೆ. ಸಿಎಂ ಅವರ ಹೆಸರು ಹೇಳಲು ಇಡಿ ಒತ್ತಡ ಹಾಕಿದರು ಎಂದು ಮಾಜಿ ಸಚಿವ ನಾಗೇಂದ್ರ ಕೂಡ ಹೇಳಿದ್ದಾರೆ. ಹೆದರಿಸುವ ಕೆಲಸ ಇಡಿ ಮಾಡುತ್ತಿದೆ ಎಂದು ದಿನೇಶ್ ಗುಂಡೂರಾವ್ ದೂರಿದರು.