ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇದು ದೇಶದ ಭವಿಷ್ಯ ರೂಪಿಸುವ ಚುನಾವಣೆ

01:31 PM Mar 09, 2024 IST | Samyukta Karnataka

ಬೆಂಗಳೂರ: ಇದು ದೇಶದ ಭವಿಷ್ಯ ರೂಪಿಸುವ ಚುನಾವಣೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲೂ ಬಿಜೆಪಿ- ಜೆಡಿಎಸ್ ಗೆಲ್ಲಿಸಲು ಪ್ರಜ್ಞಾವಂತ ಜನರು ನಿರ್ಧರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದ ಮಲ್ಲೇಶ್ವರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ವಿಕಸಿತ ಭಾರತ ಎಲ್.ಇ.ಡಿ ಪ್ರಚಾರ ವಾಹನಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾನ್ಯ ಜನರ ಅಭಿಪ್ರಾಯ, ವಿವಿಧ ಕ್ಷೇತ್ರಗಳ ಜನರ ಅಭಿಮತ ಪಡೆದು ಸಂಕಲ್ಪ ಪತ್ರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಸಾಮಾನ್ಯ ಪ್ರಜೆಯ ಭಾವನೆಗಳನ್ನು ಆಧರಿಸಿ ರೂಪಿಸುವುದು ಬಿಜೆಪಿ ಪ್ರಣಾಳಿಕೆ ಆಗಬೇಕು, ಅದು ದೇಶದ ಅಭಿವೃದ್ಧಿಯ ದಿಕ್ಸೂಚಿ ಆಗಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಕಾಳಜಿಯಾಗಿದ್ದು, ವಿಕಸಿತ ಭಾರತಕ್ಕಾಗಿ ಬಿಜೆಪಿ ಸಂಕಲ್ಪ ಪತ್ರ ಅಭಿಯಾನವನ್ನು ಆರಂಭಿಸಿದ್ದು ಅತ್ಯಂತ ಸರಳವಾಗಿ ಮಿಸ್ ಕಾಲ್ ಕೊಡುವ ಮೂಲಕ ಹಾಗೂ ವಾಯ್ಸ್ ರೆಕಾರ್ಡ್ ಮೂಲಕವೂ ಈ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ. 9090902024 ಗೆ ಮಿಸ್ ಕಾಲ್ ಕೊಡುವ ನಂತರ ಬರುವ ಲಿಂಕ್ ಅನ್ನು ಬಳಸಿ, ನಮೋ ಆಪ್ ಮೂಲಕ ಅಥವಾ ವಿಕಸಿತ ಭಾರತದ ಯಾತ್ರೆಯ ರಥ ತೆರಳುವ ಸ್ಥಳಗಳಲ್ಲಿ ಇರಿಸಲಾಗುವ ಪೆಟ್ಟಿಗೆಗಳಲ್ಲಿ ವಿವಿಧ ವರ್ಗಗಳ ಜನರೆಲ್ಲರೂ ತಮ್ಮ ಅಭಿಪ್ರಾಯಗಳನ್ನು ಬರೆದು ತಿಳಿಸಬೇಕು, ಸರಕಾರದ ಸಾಧನೆ ತಿಳಿಸುವುದು ಮಾತ್ರವಲ್ಲದೆ ಸಲಹಾ ಪೆಟ್ಟಿಗೆಯೊಂದಿಗೆ ಈ ವಾಹನ ತೆರಳಲಿದೆ. ಜನರ ಅಭಿಪ್ರಾಯ ಪಡೆಯುವುದು ಮತ್ತು ಅದನ್ನು ಅನುಷ್ಠಾನಕ್ಕೆ ತರಲು ಶ್ರಮಿಸುವುದು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದಿದ್ದಾರೆ.

Next Article