ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇನ್ನೂ ‌ಮೂರು ವರ್ಷ ನಾನೇ ಸಿಎಂ

02:16 PM Nov 07, 2024 IST | Samyukta Karnataka

ಬಳ್ಳಾರಿ: ಇನ್ನೂ ‌ಮೂರು‌‌ ವರ್ಷ ನಾನೇ ಸಿಎಂ ಇದರಲ್ಲಿ ‌ಯಾವುದೇ ಅನುಮಾನ ಬೇಡ, ಸಂಡೂರಲ್ಲಿ‌ ಅನ್ನಪೂರ್ಣ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಂಡೂರು ತಾಲೂಕಿನ ಬೊಮ್ಮಘಟ್ಟ ಗ್ರಾಮದಲ್ಲಿ ಚುನಾವಣೆ ಪ್ರಚಾರದಲ್ಲಿ ‌ಮಾತನಾಡಿದ ಅವರು ಈ.ತುಕಾರಾಮ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಕಾತರಿಸುತ್ತಾ ಕೆಲಸ ಮಾಡುವ ಶಾಸಕರಾಗಿದ್ದರು, ಈಗ ಸಂಸದರಾಗಿದ್ದಾರೆ. ಸಂಡೂರಿನಲ್ಲಿ ಈಗ ಆಗಿರುವ ಎಲ್ಲಾ ಅಭಿವೃದ್ಧಿಗಳೂ ಈ.ತುಕಾರಾಮ್ ಮತ್ತು ಸಂತೋಷ್ ಲಾಡ್ ಅವರ ಅವಧಿಯಲ್ಲಿ ಆಗಿರುವಂಥವು. ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟದ ಅವಧಿಯಿಂದಲೂ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿದೆ. ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲೂ ಜನರ ಪರವಾಗಿ ಇರಲಿಲ್ಲ. ಈಗಲೂ ಇಲ್ಲ.

ಪ್ರಧಾನಿ ನರೇಂದ್ರ ಮೋದಿಯವರು "ನಾ ಖಾವೋಂಗಾ-ನಾ ಖಾನೆ ದೂಂಗಾ" ಎಂದು ಭಾಷಣ ಮಾಡುತ್ತಾರೆ. ಆದರೆ ಜನಾರ್ಧನರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಂಡಿದ್ದಾರೆ. ಜನಾರ್ದನ ರೆಡ್ಡಿಯನ್ನು ನ್ಯಾಯಲಯವೇ ಅಪರಾಧಿ ಎಂದು ಘೋಷಿಸಿ ಜೈಲಿಗೆ ಹಾಕಿತ್ತು‌. ಬಿಜೆಪಿಗಾಗಲಿ, ಮೋದಿಗಾಗಲಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಯೋಗ್ಯತೆ ಇದೆಯಾ ಎಂದು ಪ್ರಶ್ನಿಸಿದರು‌.

ಬಿಜೆಪಿ ಅಧಿಕಾರದಲ್ಲಿದ್ದಷ್ಟೂ ದಿನ ಸಂಡೂರಿಗೆ ಒಂದೇ ಒಂದು ಮನೆ ಕೊಡುವ ಯೋಗ್ಯತೆ ಇರಲಿಲ್ಲ. ಆಪರೇಷನ್ ಕಮಲದ ಮೂಲಕ ಜನ ಗೆಲ್ಲಿಸಿದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ಲೂಟಿ ಮಾಡಿಕೊಂಡು ಹೋದರು. ಅದಕ್ಕೇ ಆಪರೇಷನ್ ಕಮಲದ ಸರ್ಕಾರವನ್ನು ಜನ ಸೋಲಿಸಿ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದರು.ನಾವು ಅಧಿಕಾರಕ್ಕೆ ಬಂದ 8 ತಿಂಗಳಲ್ಲೇ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ಪ್ರತೀ ತಿಂಗಳು 2000 ರೂಪಾಯಿ ಕೊಡ್ತಾ ಇರೋದು ನಮ್ಮ ಸರ್ಕಾರ. 1 ಕೋಟಿ 61 ಲಕ್ಷ ಕುಟುಂಬಗಳಿಗೆ ಉಚಿತ ಕರೆಂಟ್ ಕೊಡ್ತಾ ಇರೋದು ನಾವು. ಐದು ಕೆಜಿ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಹಣವನ್ನೂ ಕೊಡ್ತಾ ಇರೋದು ನಾವು‌. ಹೀಗೆ ಐದಕ್ಕೆ ಐದೂ ಗ್ಯಾರಂಟಿಗಳ ಮೂಲಕ ಸಂಡೂರಿನ ಜನರಿಗೆ, ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ಕೊಡ್ತಾ ಇರೋದು ನಾವು. ನಮ್ಮ ಕಾಂಗ್ರೆಸ್ ಸರ್ಕಾರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ BJP ಏಕೆ ಜಾರಿ ಮಾಡಿಲ್ಲ ಎನ್ನುವುದನ್ನು ಜನರಿಗೆ ಉತ್ತರಿಸಬೇಕು ಎಂದರು.

ಸಂಡೂರಿನ ಅಭಿವೃದ್ಧಿಗೆ ಈ.ತುಕಾರಾಮ್ ಮತ್ತು ಇವರ ಧರ್ಮಪತ್ನಿ ಅನ್ನಪೂರ್ಣಮ್ಮ ಅವರು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಅನ್ನಪೂರ್ಣಮ್ಮ ಗೆದ್ದರೆ ಸಂಡೂರಿನ ಅಭಿವೃದ್ಧಿ ಕೆಲಸಗಳು ಸರಾಗವಾಗಿ, ವೇಗವಾಗಿ ಮುಂದುವರೆಯುತ್ತವೆ ಎಂದರು.

ಅನ್ನಪೂರ್ಣಮ್ಮ ನನ್ನ ಆತ್ಮೀಯ ಸ್ನೇಹಿತ‌ನ ಮಗಳು. ಇವರನ್ನು ಗೆಲ್ಲಿಸಿ ಕಳುಹಿಸಿ ಸಂಡೂರಿನ ಜನರಿಗೆ ತುಂಬಾ ಅನುಕೂಲಗಳಾಗುತ್ತವೆ ಎಂದರು.

Tags :
#ಉಪಚುನಾವಣೆ#ಬಳ್ಳಾರಿ#ಮುಖ್ಯಮಂತ್ರಿ#ಸಿದ್ದರಾಮಯ್ಯ
Next Article