ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇಬ್ಬರು ಯುವತಿಯರ ಹತ್ಯೆ ನಮಗೂ ನೋವುಂಟು ಮಾಡಿದೆ

08:20 PM May 19, 2024 IST | Samyukta Karnataka

ಹುಬ್ಬಳ್ಳಿ: ೨೦೨೨-೨೩ರಲ್ಲಿ ಆದ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ ೨೦೨೪ರಲ್ಲಿ ಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಇಲ್ಲಿಯ ಇಬ್ಬರು ಯುವತಿಯರ ಹತ್ಯೆ ನಮಗೂ ನೋವುಂಟು ಮಾಡಿದೆ. ಒಂದರ ಮೇಲೊಂದು ಹತ್ಯೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಅದನ್ನು ಹೋಗಲಾಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಹೇಳಿದರು.
ನಗರದಲ್ಲಿ ಹತ್ಯೆಯಾದ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣದಲ್ಲಿ ನಮ್ಮ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದ ತಪ್ಪು ಕಂಡು ಬಂದರೆ ಖಂಡಿತ ಕ್ರಮ ಜರುಗಿಸಲಾಗುತ್ತದೆ. ಇಲಾಖೆಯ ಮೇಲೆ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದರು.
ಈಗಾಗಲೇ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ಅಂಜಲಿ ಪ್ರಕರಣ ತನಿಖೆ ವಿಷಯದ ಕುರಿತು ಗೃಹ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ಮಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು.

Next Article