For the best experience, open
https://m.samyuktakarnataka.in
on your mobile browser.

ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

10:40 PM Jan 17, 2024 IST | Samyukta Karnataka
ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಳಗಾವಿ(ಪಾಲಬಾವಿ): ಹೆತ್ತ ತಾಯಿಯೊಬ್ಬಳು ತನ್ನ ಎರಡು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕು ಸುಲ್ತಾನಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕು ಸುಲ್ತಾನಪುರ ಗ್ರಾಮದ ಸರಸ್ವತಿ ನಿತಿನ್ ಕಿರವೆ(೨೬), ಮಕ್ಕಳಾದ ದೀಪಿಕಾ(೭) ಹಾಗೂ ರಿತಿಕಾ (೪) ಮೃತಪಟ್ಟ ದುರ್ದೈವಿಗಳು.
ಮಹಾರಾಷ್ಟ್ರರದ ಸಾಂಗ್ಲಿ ಪಟ್ಟಣದ ನಿತಿನ್ ಕಿರವೆ ಎಂಬಾತನೊಂದಿಗೆ ೨೦೧೬ರಲ್ಲಿ ರಾಯಬಾಗ ತಾಲೂಕು ಸುಲ್ತಾನಪುರ ಗ್ರಾಮದ ಸರಸ್ವತಿ ಮದುವೆಯಾಗಿತ್ತು. ದಂಪತಿಗೆ ಎರಡು ಹೆಣ್ಣು ಮಕ್ಕಳಿದ್ದವು. ಗಂಡನ ಮನೆಯವರ ಕಿರುಕುಳದಿಂದ ೮ ತಿಂಗಳು ಹಿಂದೆ ಸರಸ್ವತಿ ಸುಲ್ತಾನಪುರ ಗ್ರಾಮದ ತವರುಮನೆಗೆ ಮಕ್ಕಳೊಂದಿಗೆ ಬಂದು ವಾಸವಾಗಿದ್ದಳು. ತವರುಮನೆ ಸೇರಿದ ಸರಸ್ವತಿ ಮಾನಸಿಕವಾಗಿ ನೊಂದು ಮಕ್ಕಳನ್ನು ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಹಾರೂಗೇರಿ ಸಿಪಿಐ ರವಿಚಂದ್ರನ್ ಬಡಪಕೀರಪ್ಪನವರ ಹಾಗೂ ಸಿಬ್ಬಂದಿಗಳಾದ ಎಸ್.ಬಿ. ಬೆಕ್ಕೇರಿ, ಎಚ್.ಆರ್. ಅಂಬಿ, ಪಿ.ಪಿ. ದೊಡ್ಡಮನಿ ಸ್ಥಳ ಪರಿಶೀಲನೆ ಮಾಡಿ
ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೈಲಹೊಂಗಲ ತಾಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು. ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು.