For the best experience, open
https://m.samyuktakarnataka.in
on your mobile browser.

ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ

11:59 AM Jan 27, 2024 IST | Samyukta Karnataka
ಈ ನೋಟಿಸ್  ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ

ಬೆಂಗಳೂರು: ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಬಂದ್​​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು

'ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ. ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗು ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ" ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆ ಎಂದಿದ್ದಾರೆ.