ಈ ಸ್ವತ್ತು ಆಂದೋಲನಕ್ಕೆ ಚಾಲನೆ
ಶ್ರೀರಂಗಪಟ್ಟಣ: ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಶ್ರೀರಂಗಪಟ್ಟಣ ತಾಲ್ಲೂಕು ಮಟ್ಟದ ಈ- ಸ್ವತ್ತು ಅಭಿಯಾನಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಶ್ರೀರಂಗಪಟ್ಟಣಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿಯೂ ಇ-ಸ್ವತ್ತುಗಳನ್ನು ನೀಡಿ ಗ್ರಾಮೀಣ ಜನರಿಗೆ ಸಹಕಾರಿಯಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳ ಸಾರ್ವಜನಿಕ ಆಸ್ತಿಗಳಾದ, ಆಸ್ಪತ್ರೆ ,ಶಾಲಾ ಮತ್ತು ಅಂಗನವಾಡಿ ಕಾಮಗಾರಿಗಳ ಇ- ಸ್ವತ್ತುಗಳ ವಿವರವನ್ನು ಆಯಾ ಗ್ರಾಮ ಪಂಚಾಯಿತಿಗಳ ಅಂಗನವಾಡಿ ಕಾರ್ಯಕರ್ತರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಓ ರವರು ಈ ಸ್ಚತ್ರು ಕುರಿತು ಗಮನಹರಿಸಿ ನೀಡಿರುವ ಅವಧಿಯೊಳಗೆ ಬಾಕಿ ಉಳಿದಿರುವ ಎಲ್ಲಾ ಸಾರ್ವಜನಿಕ ಆಸ್ತಿಗಳ ಇ-ಸ್ವತ್ತುಗಳನ್ನು ಮಾಡಿಸಬೇಕು. ಈ ಮೂಲಕ ಗ್ರಾಮೀಣ ಜನರ ಜೀವನಕ್ಕೆ ಅನುಕೂಲ ವಾಗುವಂತೆ ಸಹಕರಿಸಿ ಇ-ಸ್ವತ್ತು ಅಭಿಯಾನದ ಉದ್ದೇಶವನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೇಣು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜ್ ಮೂರ್ತಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ತಾಲೂಕು ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.