ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಉಚಿತ ಪಡಿತರ 5 ವರ್ಷದವರೆಗೆ ವಿಸ್ತರಣೆ

04:21 PM Nov 29, 2023 IST | Samyukta Karnataka

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2024 ರ ಜನವರಿ 1 ರಿಂದ 5 ವರ್ಷಗಳವರೆಗೆ ವಿಸ್ತರಿಸಲು ಸಂಪುಟ ನಿರ್ಧರಿಸಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಗರೀಬ್ ಕಲ್ಯಾಣ್ ಅನ್ನ ಯೋಜನೆ 2028ರವರೆಗೂ ಲಭ್ಯ ಇರುತ್ತದೆ. ಸದ್ಯ ಈ ಯೋಜನೆ ಡಿಸೆಂಬರ್ 31ಕ್ಕೆ ಮುಗಿಯುತ್ತದೆ. ಜನವರಿ 1ರಿಂದ ಈ ಸ್ಕೀಮ್ ಹಾಗೇ ಮುಂದುವರಿಯುತ್ತದೆ. ಗುರುತಿಸಲಾದ ಕುಟುಂಬಗಳ ಬಡವರಿಗೆ ತಿಂಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಪಡೆಯುವುದು, ಅಂತ್ಯೋದಯ ಕುಟುಂಬಗಳಿಗೆ ತಿಂಗಳಿಗೆ 35 ಕೆಜಿ ಉಚಿತ ಆಹಾರ ಧಾನ್ಯಗಳು, ಸುಮಾರು 81 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ ಮುಂದಿನ ಐದು ವರ್ಷಗಳಲ್ಲಿ ಸರ್ಕಾರ ಒಟ್ಟು ₹ 11.80 ಲಕ್ಷ ಕೋಟಿ ಖರ್ಚು ಮಾಡಲಿದೆ ಎಂದಿದ್ದಾರೆ.

Next Article