For the best experience, open
https://m.samyuktakarnataka.in
on your mobile browser.

ಉತ್ತರ ಕರ್ನಾಟಕದ ಜನತೆ ಏನು ಮಾಡಬೇಕು…

02:08 PM Dec 18, 2024 IST | Samyukta Karnataka
ಉತ್ತರ ಕರ್ನಾಟಕದ ಜನತೆ ಏನು ಮಾಡಬೇಕು…

ದಕ್ಷಿಣ ಕರ್ನಾಟಕಕ್ಕೆ ಸಕಲ ಸೌಭಾಗ್ಯಗಳನ್ನು, ಮೂಲಭೂತ ಸೌಕರ್ಯಗಳನ್ನು ನೀಡಿದರೆ ಉತ್ತರ ಕರ್ನಾಟಕದ ಜನತೆ ಏನು ಮಾಡಬೇಕು

ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು

✈️ದಕ್ಷಿಣ ಕರ್ನಾಟಕಕ್ಕೆ ಸಕಲ ಸೌಭಾಗ್ಯಗಳನ್ನು, ಮೂಲಭೂತ ಸೌಕರ್ಯಗಳನ್ನು ನೀಡಿದರೆ ಉತ್ತರ ಕರ್ನಾಟಕದ ಜನತೆ ಏನು ಮಾಡಬೇಕು ಹಾಗೂ ಇಲ್ಲಿನ ಅಭಿವೃದ್ಧಿ ಹೇಗೆ ಸಾಧ್ಯ ಎಂಬುದನ್ನು ಅಧಿವೇಶನದಲ್ಲಿ ಚರ್ಚಿಸಲಾಯಿತು.

✈️ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ನಮ್ಮ ಉತ್ತರ ಕರ್ನಾಟಕದ ಯಾವುದಾದರೂ ಒಂದು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಮಾಡುವ ಯೋಜನೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕು ಎಂದು ಒತ್ತಾಯಿಸಿದೆ.

✈️ಇದರಿಂದ ಸ್ಥಳೀಯ ಆರ್ಥಿಕತೆಗೆ ಅನುಕೂಲವಾಗುತ್ತದೆ; ಅಲ್ಲದೆ, ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಕೃಷಿ ಉತ್ಪನ್ನ, ಜವಳಿ, ವ್ಯಾಪಾರ ಹಾಗೂ ವಾಣಿಜ್ಯಕ್ಕೆ ಸಾಕಷ್ಟು ಅನುಕೂಲಕರವಾದ ವಾತಾವರಣ ಸೃಷ್ಟಿಯಾಗುತ್ತದೆ.

✈️ಎಲ್ಲ ಅಭಿವೃದ್ಧಿ ಕಾರ್ಯಗಳನ್ನು, ಯೋಜನೆಗಳನ್ನು ದಕ್ಷಿಣ ಕರ್ನಾಟಕಕ್ಕೆ ಕೊಡದೆ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ [balanced regional development] ಸರ್ಕಾರ ಒತ್ತು ನೀಡಬೇಕೆಂದು ಒತ್ತಾಯಿಸಿದೆ ಎಂದಿದ್ದಾರೆ.

Tags :