ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ : ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್)ದ ಸ್ವಂತ ಉದ್ಯಮವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜನವರಿ ಮಾಹೆಯಲ್ಲಿ ಚನ್ನಪಟ್ಟಣ ತಾಲ್ಲೂಕು ಪಂಚಾಯ್ತಿಯಲ್ಲಿ ಹಮ್ಮಿಕೊಳ್ಳಲಾಗುವುದು.
18 ವರ್ಷ ದಿಂದ 45 ವರ್ಷದವರಾಗಿರಬೇಕು. ಅರ್ಜಿಯನ್ನು ಜಿಲ್ಲಾ ಕೌಶಲ್ಯಾಭಿವೃಧ್ಧಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ, ನಂ. 208 ಕಂದಾಯ ಭವನ, ಬಿ.ಎಂ ರಸ್ತೆ, ರಾಮನಗರ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆದು ಜ. 17ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಜಂಟಿ ನಿರ್ದೇಶಕರ ಕಚೇರಿ, ನಂ. 208 ಕಂದಾಯ ಭವನ, ಬಿ.ಎಂ. ರಸ್ತೆ, ರಾಮನಗರ. ದೂ ಸಂಖ್ಯೆ: 8861944964, 7090299843 ಅಥವಾ 6366093656 ಅನ್ನು ಸಂಪರ್ಕಿಸುವAತೆ ರಾಮನಗರ ಜಿಲ್ಲೆಯ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)ದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.