ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಉದ್ಯೋಗ ಮೇಳಕ್ಕೆ ತೆರಳುವವರಿಗೆ ಫೆ. 25, 26ರಂದು ವಿಶೇಷ ಬಸ್ ವ್ಯವಸ್ಥೆ

12:10 AM Feb 21, 2024 IST | Samyukta Karnataka

ಹುಬ್ಬಳ್ಳಿ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿ ಅರಮನೆ ಮೈದಾನದಲ್ಲಿ ಫೆ. 26 ಹಾಗೂ 27ರಂದು ಆಯೋಜಿಸಲಾಗಿರುವ ಬೃಹತ್ ರಾಜ್ಯಮಟ್ಟದ ಉದ್ಯೋಗ ಮೇಳ- 2024ರಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಫೆ.25 ಹಾಗೂ 26 ರಂದು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಬೆಂಗಳೂರಿಗೆ ತೆರಳುತ್ತಿದ್ದಾರೆ.

ಧಾರವಾಡ ಜಿಲ್ಲೆಯಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಹಾಗೂ ಅವರ ಪೋಷಕರು ತೆರಳುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಹಾಗೂ ಸುತ್ತಮುತ್ತಲಿನ ಪ್ರದೇಶ ಗಳಿಂದ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಫೆ.25 ರವಿವಾರ ಹಾಗೂ ಫೆ.26 ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಈ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Next Article