ಉಪಚುನಾವಣೆ ದಿನಾಂಕ ಬದಲಾವಣೆ
ಈ ಹಿಂದೆ ನ.13 ರಂದು ಚುನಾವಣೆ ಘೋಷಿಸಲಾಗಿತ್ತು. ಈಗ ನ.20ಕ್ಕೆ ಚುನಾವಣೆ ಮುಂದೂಡಿಕೆಯಾಗಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ
ನವದೆಹಲಿ: ಉತ್ತರ ಪ್ರದೇಶ, ಕೇರಳ ಮತ್ತು ಪಂಜಾಬ್ ರಾಜ್ಯಗಳ ಉಪಚುನಾವಣೆಯನ್ನು ನವೆಂಬರ್ 13 ರಿಂದ ನವೆಂಬರ್ 20 ಕ್ಕೆ ಮುಂದೂಡಲಾಗಿದೆ.
ಈ ಕುರಿತು ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ಈ ಹಿಂದೆ ನ.13 ರಂದು ಚುನಾವಣೆ ಘೋಷಿಸಲಾಗಿತ್ತು. ಈಗ ನ.20ಕ್ಕೆ ಚುನಾವಣೆ ಮುಂದೂಡಿಕೆಯಾಗಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್, ಬಿಜೆಪಿ, ಬಿಎಸ್ ಪಿ ಮತ್ತು ಆರ್ಎಲ್ಡಿ ಸೇರಿದಂತೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಮನವಿಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಹಬ್ಬಗಳ ಕಾರಣದಿಂದಾಗಿ ಈ ರಾಜ್ಯಗಳಲ್ಲಿ ದಿನಾಂಕಗಳನ್ನು ಬದಲಾಯಿಸುವಂತೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು. ಕೇರಳದ 56-ಪಾಲಕ್ಕಾಡ್ ಮತಕ್ಷೇತ್ರದಲ್ಲಿ 2024 ರ ನವೆಂಬರ್ 13 ರಿಂದ 15 ರವರೆಗೆ "ಕಲ್ಪತಿ ರಥೋತ್ಸವಂ" ಉತ್ಸವ ನಡೆಯಲಿದ್ದು, ಕ್ಷೇತ್ರದ ಬಹುತೇಕ ಮತದಾರರು ಇದರಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಹೇಳಿತ್ತು. ಹೀಗಾಗಿ ಕೇರಳ ಉಪಚುನಾವಣೆಯ ದಿನಾಂಕ ಬದಲಾಯಿಸಲಾಗಿದೆ.