ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಉಪಚುನಾವಣೆ ದಿನಾಂಕ ಬದಲಾವಣೆ

04:20 PM Nov 04, 2024 IST | Samyukta Karnataka

ಈ ಹಿಂದೆ ನ.13 ರಂದು ಚುನಾವಣೆ ಘೋಷಿಸಲಾಗಿತ್ತು. ಈಗ ನ.20ಕ್ಕೆ ಚುನಾವಣೆ ಮುಂದೂಡಿಕೆಯಾಗಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ

ನವದೆಹಲಿ: ಉತ್ತರ ಪ್ರದೇಶ, ಕೇರಳ ಮತ್ತು ಪಂಜಾಬ್ ರಾಜ್ಯಗಳ ಉಪಚುನಾವಣೆಯನ್ನು ನವೆಂಬರ್ 13 ರಿಂದ ನವೆಂಬರ್ 20 ಕ್ಕೆ ಮುಂದೂಡಲಾಗಿದೆ.
ಈ ಕುರಿತು ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ಈ ಹಿಂದೆ ನ.13 ರಂದು ಚುನಾವಣೆ ಘೋಷಿಸಲಾಗಿತ್ತು. ಈಗ ನ.20ಕ್ಕೆ ಚುನಾವಣೆ ಮುಂದೂಡಿಕೆಯಾಗಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್, ಬಿಜೆಪಿ, ಬಿಎಸ್ ಪಿ ಮತ್ತು ಆರ್​ಎಲ್​ಡಿ ಸೇರಿದಂತೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಮನವಿಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಹಬ್ಬಗಳ ಕಾರಣದಿಂದಾಗಿ ಈ ರಾಜ್ಯಗಳಲ್ಲಿ ದಿನಾಂಕಗಳನ್ನು ಬದಲಾಯಿಸುವಂತೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು. ಕೇರಳದ 56-ಪಾಲಕ್ಕಾಡ್ ಮತಕ್ಷೇತ್ರದಲ್ಲಿ 2024 ರ ನವೆಂಬರ್ 13 ರಿಂದ 15 ರವರೆಗೆ "ಕಲ್ಪತಿ ರಥೋತ್ಸವಂ" ಉತ್ಸವ ನಡೆಯಲಿದ್ದು, ಕ್ಷೇತ್ರದ ಬಹುತೇಕ ಮತದಾರರು ಇದರಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಹೇಳಿತ್ತು. ಹೀಗಾಗಿ ಕೇರಳ ಉಪಚುನಾವಣೆಯ ದಿನಾಂಕ ಬದಲಾಯಿಸಲಾಗಿದೆ.

Tags :
#Election#ಉಪಚುನಾವಣೆ
Next Article